ಬೆಂಗಳೂರು; ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ ನಡೆಸಿದ್ರು.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು. ಈ ವೇಳೆ ಕೋಟಗೆ ಮೇಲ್ಮನೆ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಸುರೇಶ್ ಕುಮಾರ್, ಪರಿಷತ್ ಸದಸ್ಯರಾದ ಎನ್ ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಶಾಂತರಾಮ್ ಬುಡ್ನಿ ಸಾಥ್ ನೀಡಿದ್ರು.
ನನ್ನ ಮೇಲೆ ಆರೋಪ ಹಿಂಪಡೆಯಿರಿ, ಇಲ್ಲವೇ ಸಿಬಿಐ ತನಿಖೆ ಕೊಡಿ ಎಂದು ಆಗ್ರಹಿಸಿ ಹೋರಾಟ ಎಂದು ಭಿತ್ತಿ ಪತ್ರ ಪ್ರದರ್ಶನದ ಮೂಲಕ ಮೌನವಾಗಿ ಪ್ರತಿಭಟನೆ ಮಾಡಿದ್ರು. ಭೋವಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದರು ಸಿಎಂ ಸಿದ್ದರಾಮಯ್ಯ. ಹಿಂದೆ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಇದ್ದಾಗ,ಭ್ರಷ್ಟಾಚಾರ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕೋಟ ಶ್ರೀನಿವಾಸ್ ಪೂಜಾರಿ ಇಂದು ಮೌನ ಹೋರಾಟ ನಡೆಸಿದ್ರು.
ಇನ್ನು ಈ ಬಗ್ಗೆ ವಿಧಾನಸೌಧದಲ್ಲಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ ಒಂದು ವಾರದ ಕೆಳಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದೆ.ಸದನದ ಒಳಗೆ, ಹೊರಗೂ ಪ್ರಸ್ತಾಪ ಮಾಡಿದ್ದರು.ನಾನು ಯಾವುದೇ ಖಾತೆ ನಿಭಾಯಿಸಿದ್ದರೂ ಒಂದು ರೂ. ಭ್ರಷ್ಟಾಚಾರ ಮಾಡಿಲ್ಲ.ಒಂದು ವೇಳೆ ಭ್ರಷ್ಟಾಚಾರ ಮಾಡಿದ್ರೆ ಸಿಬಿಐಗೆ ವಹಿಸಿ ಎಂದು ಪತ್ರ ಬರೆದಿದ್ದೆ.ಸಿಬಿಐಗೆ ವಹಿಸದಿದ್ದರೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದೆ.ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹೀಗಾಗಿ ನಿನ್ನೆಯೂ ಮತ್ತೊಂದು ಪತ್ರ ಸಿಎಂಗೆ ಬರೆದಿದ್ದೇನೆ.ಸದನದ ಒಳಗೆ ನಿಂತು ನನ್ನನ್ನ ನಾನು ಸಮರ್ಥಿಸಿಕೊಳ್ಳೋಕೆ ಅವಕಾಶ ಇಲ್ಲ.ನಾನು ಸಂಸದನಾದ ಕಾರಣ ಇದು ಸಾಧ್ಯವಾಗಲಿಲ್ಲ.ನನ್ನ ಮೇಲೆ ಮಾಡಿರುವ ಆರೋಪವನ್ನ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಸಿಬಿಐ ತನಿಖೆಗೆ ವಹಿಸುವಂತೆ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.
ಇನ್ನು ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಆ ಬಗ್ಗೆ ಯೋಚನೆ ಮಾಡಿ ತೀರ್ಮಾನಿಸುತ್ತೇನೆ ಎಂದಿದ್ದಾರೆ.