ಮನೆ Latest News ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ;ಮಣ್ಣಿನಡಿ ಸಿಲುಕಿದ ವಾಹನಗಳು

ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ;ಮಣ್ಣಿನಡಿ ಸಿಲುಕಿದ ವಾಹನಗಳು

0

ಹಾಸನ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಇನ್ನು ಮೊನ್ನೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿತ್ತು. ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆಯೇ ಗುಡ್ಡ ಕುಸಿದು ಬಿದ್ದಿತ್ತು. ಇದೀಗ ಮತ್ತೆ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಆಗಿದೆ.

ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಉಂಟಾಗಿದೆ. ಪರಿಣಾಮ ಆರು ವಾಹನಗಳು ಮಣ್ಣನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಒಟ್ಟು ಆರು ವಾಹನಗಳನ್ನು ಮಣ್ಣಿನಡಿ ಸಿಲುಕಿವೆ ಎನ್ನಲಾಗಿದೆ

ಭಾರೀ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆ ಕೂಡ ಕಷ್ಟವಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ.ಇನ್ನು ಮತ್ತಷ್ಟು ಮಣ್ಣು ಕುಸಿಯುವ ಭೀತಿ ಇರೋದರಿಂದ ಸದ್ಯಕ್ಕೆ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು ಸಂಚಾರ ದಟ್ಟಣೆ ಆಗುವ ಹಿನ್ನೆಲೆ ಸದ್ಯಕ್ಕೆ ಸಕಲೇಶಪುರ ರಸ್ತೆಯಲ್ಲಿ ವಾಹನ ಸವಾರರು ಸಂಚರಿಸಬಾರದೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಮನವಿಮಾಡಿದ್ದಾರೆ.

ಇದರ ಮಧ್ಯೆ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭಾರೀ ಭೂ ಕುಸಿತ ಉಂಟಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದೆ.200 ಮೀಟರ್ ಗೂ ಹೆಚ್ಚು ದೂರು ರಸ್ತೆ  ಕೊಚ್ಚಿ ಹೋಗಿದೆ.ರಸ್ತೆಯೇ ಕೊಚ್ಚಿಹೋಗಿರೋದ್ರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ಮಾಡಲಾಗಿದ್ದು, ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ.