ಬೆಂಗಳೂರು; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮನೆ ಮನೆಯಲ್ಲಿ ತಿರಂಗಾ ಅಭಿಯಾನಕ್ಕೆ ಬಿಜೆಪಿ ಕರೆ ಕೊಟ್ಟಿದೆ. ಈ ಹಿನ್ನೆಲೆ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ರು.
ಬೆಂಗಳೂರಿನ ವಸಂತ ನಗರ ಮಂಡಲದ ಬೂತ್ ನಂ. 44ರಲ್ಲಿ ಹರ್ ಘರ್ ತಿರಂಗ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ರು. ಬಿಜೆಪಿ ಬೂತ್ ನಂ. 44 ರ ಅಧ್ಯಕ್ಷ ಸಾಗರ್ ಎಂ. ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಾಲನೆ ನೀಡಿದ್ರು. ಈ ವೇಳೆ ಸಂಸದ ಪಿ.ಸಿ. ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಸೂಚನೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ.ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದೇವೆ.ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ, ಪುತ್ಥಳಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ನಾಳೆ ದೇಶ ವಿಭಜನೆಯ ಸ್ಮೃತಿ ದಿವಸ್ ದೇಶಾದ್ಯಂತ ನಡೆಯಲಿದೆ ಎಂದರು.
ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ರೆಬೆಲ್ ನಾಯಕರ ಪ್ರತ್ಯೇಕ ಪಾದಯಾತ್ರೆಗೆ ಸಿದ್ಧತೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ರಾಜ್ಯದ ಅಧ್ಯಕ್ಷನಾಗಿ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ.ರಾಜ್ಯಾಧ್ಯಕ್ಷ ಆದಾಗಿನಿಂದಲೂ ಅದನ್ನೂ ಮಾಡುತ್ತಾ ಬಂದಿದ್ದೇನೆ. ಕೆಲವರು ಪ್ರತ್ಯೇಕ ಪಾದಯಾತ್ರೆ ಮಾಡುತ್ತೇವೆ ಅಂತಾ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಅದರಿಂದ ಪಕ್ಷಕ್ಕೆ ಶಕ್ತಿ ಸಿಗುತ್ತದೆ ಅಂತಾದರೆ ವರಿಷ್ಠರು ಅದಕ್ಕೆ ಸಮ್ಮತಿ ಕೊಡುತ್ತಾರೆ.ಅದಕ್ಕೆ ನನ್ನ ಯಾವುದೇ ರೀತಿಯ ತಕರಾರಿಲ್ಲ. ವರಿಷ್ಠರನ್ನು ಭೇಟಿ ಮಾಡುತ್ತೇವೆ ಎಂದಿದ್ದಾರೆ. ಅನುಮತಿ ಕೊಟ್ಟರೆ ಮಾಡಲು ಅವರೂ ಸ್ವತಂತ್ರರಿದ್ದಾರೆ ಎಂದಿದ್ದಾರೆ.
ಅಲ್ಲದೇ ಯಾರು ಏನೇ ಮಾಡಿದರೂ ಸಹಾ ಅದು ಪಕ್ಷಕ್ಕೆ ಪೂರಕವಾಗಿರಬೇಕು, ಸಂಘಟನೆಗೆ ಲಾಭ ಆಗಬೇಕು ಎಂಬ ಸದುದ್ದೇಶ ಇದ್ದರೆ ಸಾಕು ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್ ಕಟ್ ಆಗಿರುವ ಪ್ರಕರಣ; ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಭೇಟಿ
ಕೊಪ್ಪಳ; ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ವಿಜಯನಗರ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಇಂದು ಜಲಾಶಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್ , ಮಾಜಿ ಸಚಿವರಾದ ಶ್ರೀ ಆನಂದ್ ಸಿಂಗ್, ಶ್ರೀ ಹಾಲಪ್ಪ ಆಚಾರ್, ಮಾಜಿ ಸಂಸದರಾದ ಶ್ರೀ ಶಿವರಾಮೇಗೌಡ, ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀಮತಿ ಹೇಮಲತಾ ನಾಯಕ್, ಮಾಜಿ ಶಾಸಕರಾದ ಶ್ರೀ ಬಸವರಾಜ ದಡೇಸುಗೂರು, ಮುಖಂಡರಾದ ಶ್ರೀ ಬಸವರಾಜ ಕ್ಯಾವಟರ್, ಶ್ರೀ ಸುರೇಶ್ ಬಾಬು, ಶ್ರೀ ಸಿದ್ಧಾರ್ಥ ಸಿಂಗ್, ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿದರು .
ಈ ವೇಳೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಘಟನೆಯಿಂದಾಗಿ ತುಂಗಭದ್ರಾ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳ ಜನಸಾಮಾನ್ಯರು ಪ್ರವಾಹ ಎದುರಾಗುವ ಆತಂಕದಲ್ಲಿದ್ದಾರೆ. ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆ ಎದುರಾಗುವ ಆತಂಕದಲ್ಲಿದ್ದಾರೆ.ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇನ್ನು ಇದೇ ವೇಳೆ ಮಾತನಾಡಿದ ಅವರು ಘಟನೆ ಬಗ್ಗೆ ಡಿಸಿಎಂ, ಜಲಸಂಪನ್ಮೂಲ ಸಚಿವರು ಆಗಿರುವ ಡಿ ಕೆ ಶಿವಕುಮಾರ್ ಅಧಿಕಾರಿಗಳ ಪರವಾಗಿಯೇ ಮಾತನಾಡಿದ್ದಾರೆ. ಯಾವ ಅಧಿಕಾರಿಯನ್ನು ಕೂಡ ಅವರು ಹೊಣೆಗಾರಿಕೆ ಮಾಡಿಲ್ಲ. ಅಲ್ಲದೇ ಒಂದು ವರ್ಷದಿಂದ ತುಂಗಭದ್ರಾ ಡ್ಯಾಂಗೆ ಚೀಪ್ ಇಂಜಿನಿಯರ್ ನೇಮಕ ಮಾಡಿಲ್ಲ. ತುಂಗಭದ್ರಾ ಡ್ಯಾಂಗೆ ಯಾಕೆ ಚೀಪ್ ಇಂಜಿನಿಯರ್ ನ್ನು ಸರ್ಕಾರ ನೇಮಕ ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಜಲಸಂಪನ್ಮೂಲ ಸಚಿವರಾದವರು ಕರುನಾಡಿನ ನೆಲ, ಜಲವನ್ನು ಕಾಪಾಡಬೇಕಿದೆ. ಆದರೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೆಲ ಜಲಕ್ಕಿಂತ ಸಂಪನ್ಮೂಲದ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.










