ಹೊಸಪೇಟೆ : ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮಾಹಿತಿ ನೀಡಿದ್ದಾರೆ.
ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.
ಸ್ಟಾಪ್ ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ವೈಕುಂಠ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಜಮೀರ್ ಅಹಮದ್ ಖಾನ್ ದಿನಕ್ಕೆ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದರು. ತಾಂತ್ರಿಕ ತಂಡದ ನಿರಂತರ ಪರಿಶ್ರಮ ದಿಂದ ಸ್ಟಾಪ್ ಗೇಟ್ ಅಳವಡಿಕೆಯ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.
ಸ್ಟಾಪ್ ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ವೈಕುಂಠ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಜಮೀರ್ ಅಹಮದ್ ಖಾನ್ ದಿನಕ್ಕೆ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದರು. ತಾಂತ್ರಿಕ ತಂಡದ ನಿರಂತರ ಪರಿಶ್ರಮ ದಿಂದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ಸು ಸಾಧಿಸಿದ್ದು ಇಡೀ ತಂಡಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.
ಸಚಿವ ಶಿವರಾಜ್ ತಂಗಡಗಿ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್ ಉಪಸ್ಥಿತರಿದ್ದರು.
ಇನ್ನು ಎರಡು ಕ್ರೇನ್ ಗಳ ಮೂಲಕ ಎಲಿಮೆಂಟ್ ನ್ನು ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಸಿಬ್ಬಂದಿ ಅಳವಡಿಕೆ ಮಾಡಿದ್ದಾರೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಿಬ್ಬಂದಿ ಕೆಲಸ ಮಾಡಿದ್ದಾರೆ.ಜಲಾಶಯಕ್ಕೆ ಸಣ್ಣ ಧಕ್ಕೆಯಾಗದಂತೆ ಕೆಲಸ ನಿರ್ವಹಿಸಿದ್ದಾರೆ.ಎರಡು ದಿನಗಳ ನಿರಂತರ ಶ್ರಮದಿಂದ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ. ಯಶಸ್ವಿಯಾಗಿ ಮೊದಲ ಎಲಿಮೆಂಟ್ ಅಳವಡಿಕೆ ಮಾಡಿದ ಸಿಬ್ಬಂದಿ, ಇನ್ನೊಂದು ಎಲಿಮೆಂಟ್ ಅಳವಡಿಸಲು ಯತ್ನಿಸುತ್ತಿದ್ದಾರೆ.
20 ಮೀಟರ ಉದ್ದ, ನಾಲ್ಕು ಅಡಿ ಎತ್ತರದ ಮೊದಲ ಎಲಿಮೆಂಟ್ ಅಳವಡಿಕೆ ಮಾಡಲಾಗಿದೆ. ಇಂದು ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲಿದ್ದಾರೆ. ಇನ್ನು ತುಂಗಭದ್ರಾ ಜಲಾಶಯದ ಸ್ಟಾಪಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಹಿನ್ನೆಲೆ ತುಂಗಭಗದ್ರಾ ಜಲಾಶಯ ಮೇಲೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್ ರಿಂದ ಸಂಭ್ರಮಾಚರಣೆ ನಡೆಯಿತು.ಸಿಹಿ ಹಂಚಿ ಸಂಭ್ರಮಿಸಿದ ಇಬ್ಬರು ನಾಯಕರು ಸಂಭ್ರಮಿಸಿದರು.ಸಿಬ್ಬಂದಿಯಿಂದಲೂ ಸಂಭ್ರಮಾಚರಣೆ ನಡೆಯಿತು. ಇನ್ನು ಇಂದು ಬಾಕಿ ಉಳಿದ ಎಲಿಮೆಂಟ್ ಗಳನ್ನು ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಸಿಬ್ಬಂದಿ ಅಳವಡಿಕೆ ಮಾಡಲಿದ್ದಾರೆ. ಸದ್ಯ ರೈತರು ನಿಟ್ಟಿಸಿರು ಬಿಟ್ಟಿದ್ದಾರೆ.










