ಮನೆ Latest News ಪರಪ್ಪನ ಅಗ್ರಹಾರ ಜೈಲಿನಲ್ಲ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ; ನಾಳೆ ಬಳ್ಳಾರಿ ಜೈಲಿಗೆ ನಟ...

ಪರಪ್ಪನ ಅಗ್ರಹಾರ ಜೈಲಿನಲ್ಲ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ; ನಾಳೆ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

0

 

ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಇಂದು ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರು.

ಆದರೆ ದರ್ಶನ್ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳ ಕುರಿತಾಗಿ ಇಂದು ಪ್ರಕರಣದ ದೂರುದಾರ ಉಪಮಹಾ ನೀರಿಕ್ಷಕ ಸೋಮಶೇಖರ್ ವಿಚಾರಣೆ ನಡೆಸಿದರು. ದರ್ಶನ್ ಕುಳಿತಿದ್ದ ಜಾಗದಲ್ಲಿ ದೂರುದಾರ ಮತ್ತು ಆರೋಪಿ ದರ್ಶನ್ ಸಮಕ್ಷಮ ಮಹಜರು ಪ್ರಕ್ರಿಯೆ ನಡೆಯಿತು. ವಿಚಾರಣೆ ತಡವಾಗಿದ್ದರಿಂದ ಇಂದು ದರ್ಶನ್ ರನ್ನು ಬಳ್ಳಾರಿಗೆ ಶಿಫ್ಟ್ ಮಾಡಲು ಸಾಧ್ಯವಾಗಿಲ್ಲ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸ್ಥಳ ಮಹಜರು ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.ಇನ್ನು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಾರೆ ಎಂದು ಗೊತ್ತಾಗುತ್ತಿದ್ದಂತೆ ದರ್ಶನ್ ಅವರ ಅಭಿಮಾನಿಗಳು ಬಳ್ಳಾರಿ ಕೇಂದ್ರ ಕಾರಾಗೃಹ ಬಳಿ ನಿನ್ನೆ ರಾತ್ರಿಯಿಂದಲೇ ಜಮಾಯಿಸಿದ್ದಾರೆ. ದರ್ಶನ್ ಅವರು ಬಳ್ಳಾರಿ ಜೈಲಿಗೆ ಬರುತ್ತಿದ್ದಾರೆ ಎಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇದರ ಮಧ್ಯೆ ಬಳ್ಳಾರಿ ಜೈಲಿನಲ್ಲಿದ್ದು ಬಿಡುಗಡೆಯಾಗಿರುವ ಕೈದಿ ಜಯಸಿಂಹ ಅನ್ನೋರು ಬಳ್ಳಾರಿ ಜೈಲಿನಲ್ಲೂ ಪರಪ್ಪನ ಅಗ್ರಹಾರ ಜೈಲಿನ ರೀತಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ , ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ದರ್ಶನ್ ಅವರಿಗೆ ರಾಜ ಮರ್ಯಾದೆ ನೀಡಲು ಸಹಕರಿಸಿದ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಗೃಹ ಸಚಿವ ಡಾ  ಜಿ ಪರಮೇಶ್ವರ್ ಅವರು ಆದೇಶವನ್ನು ನೀಡಿದ್ದರು.

ಇದರ ಬೆನ್ನಲ್ಲೇ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವರದಿ ನೀಡುವಂತೆ ಕಾರಾಗೃಹ ಇಲಾಖೆ ಡಿಜಿ ಮಾಲಿನಿ ಕೃಷ್ಣ ಮೂರ್ತಿ ಅವರಿಗೆ ಗೃಹ ಸಚಿವ ಜಿ ಪರಮೇಶ್ವರ್ ಆದೇಶಿಸಿದ್ದರು. ಇದೇ ವೇಳೆ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ರೆ ತೊಂದ್ರೆ ತಪ್ಪಿದ್ದಲ್ಲ ಎಂದು ಅಲರ್ಟ್ ಆದ ಅಧಿಕಾರಿಗಳು  ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಚಿಂತಿಸಿ, ಅದರಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ 24ನೇ ಎಸಿಎಂಎಂ ದರ್ಶನ್ ಅವರನ್ನು ಶಿಫ್ಟ್ ಮಾಡಲು ಒಪ್ಪಿಗೆ ನೀಡಿದೆ.

ದರ್ಶನ್ ಮಾತ್ರವಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಇತರೆ ಆರೋಪಿಗಳನ್ನು ಕೂಡ  ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಅನುಮತಿ ಕೊಟ್ಟಿದೆ. ಅದರಂತೆ ಪವನ್ , ರಾಘವೇಂದ್ರ , ನಂದೀಶ್ ಹಾಗೂ  ಜಗದೀಶ್ ಮೈಸೂರು ಜೈಲಿಗೆ, ಲಕ್ಷ್ಮಣ, ಧನರಾಜ ಶಿವಮೊಗ್ಗ ಜೈಲಿಗೆ,ವಿನಯ್ ವಿಜಯಪುರದ ಜೈಲಿಗೆ, ನಾಗರಾಜ್ ಕಲಬುರ್ಗಿ ಜೈಲಿಗೆ, ಪ್ರದೂಶ್ ಬೆಳಗಾವಿ ಜಿಲ್ಲೆಗೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ.ಇನ್ನು ನಟ ದರ್ಶನ್ ಅವರನ್ನು ನಾಳೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಳ್ಳಾರಿ ಜೈಲಿನಲ್ಲಿ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ.