ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅತ್ತ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ರೆ ಇತ್ತ ದರ್ಶನ್ ಆಪ್ತ ಚಿಕ್ಕಣ್ಣ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ್ರು.
ಮೊನ್ನೆ ನಟ ದರ್ಶನ್ ಅವರನ್ನು ಚಿಕ್ಕಣ್ಣ ಹಾಗೂ ಅಭಿಷೇಕ್ ಅಂಬರೀಶ್ ಭೇಟಿ ಮಾಡಿದ್ರು. ಚಿಕ್ಕಣ್ಣ ಪ್ರಕರಣದಲ್ಲಿ ಸಾಕ್ಷಿಯಾಗಿರೋದರಿಂದ ಅವರಿಗೆ ಈಗಾಗಲೇ ನೋಟಿಸ್ ಕೊಟ್ಟು ಪ್ರಕರಣದ ತನಿಖಾಧಿಕಾರಿ ಚಂದನ್ ಅವರು ವಿಚಾರಣೆ ನಡೆಸಿದ್ರು. ಹೀಗಿರುವಾಗ ಮೊನ್ನೆ ಚಿಕ್ಕಣ್ಣ ಅವರು ನಟ ದರ್ಶನ್ ಅವರನ್ನು ಭೇಟಿಯಾಗಿದ್ದರು. ಇದಾದ ಬೆನ್ನಲ್ಲೇ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಕೊಟ್ಟಿದ್ದರು. ಅದರಂತೆ ಇಂದು ಚಿಕ್ಕಣ್ಣ ವಿಚಾರಣೆಗೆ ಹಾಜರಾಗಿದ್ರು.
ಇನ್ನು ವಿಚಾರಣೆಗೆ ಹಾಜರಾದ ಬಳಿಕ ಮಾತನಾಡಿದ ಚಿಕ್ಕಣ್ಣ, ನಾನು ಮೊನ್ನೆ ದರ್ಶನ್ ಅವರನ್ನು ಭೇಟಿ ಮಾಡಿದ್ದೆ. ಆದರೆ ನಾನು ಒಬ್ಬ ಸಾಕ್ಷಿದಾರನಾಗಿ ಹೋಗಿ ನಟ ದರ್ಶನ್ರನ್ನು ಭೇಟಿ ಮಾಡಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಹೋಗಿ ದರ್ಶನ್ ಭೇಟಿ ಮಾಡಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ನಿನ್ನೆ ನನಗೆ ಪೊಲೀಸರು ನೋಟಿಸ್ ಕೊಟ್ಟಿದ್ದರು. ಅದರಂತೆ 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದರು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೀನಿ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗಬಾರದು ಅನ್ನೋದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ಚಿಕ್ಕಣ್ಣ ತಿಳಿಸಿದ್ದಾರೆ. ಈ ಹಿಂದೆ ದರ್ಶನ್ ಅವರ ಬಂಧನವಾಗ ಬೆನ್ನಲ್ಲೇ ಚಿಕ್ಕಣ್ಣ ಅವರಿಗೂ ನೋಟಿಸ್ ನೀಡಿ ಪ್ರಕರಣದ ತನಿಖಾಧಿಕಾರಿಗಳು ಚಿಕ್ಕಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣನಿಗೆ ಪೊಲೀಸರಿದ ನೋಟಿಸ್ ಜಾರಿ
ಬೆಂಗಳೂರು; ಚಿತ್ರದುರ್ಗ ಮೂಲದ ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದೆ. ಆರೋಪಿಗಳು ವಿಚಾರಣೆ ವೇಳೆ ಹಲವು ಭಯಾನಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಕಾಮಿಡಿ ಸ್ಟಾರ್ ಚಿಕ್ಕಣ್ಣ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಕೊಲೆ ನಡೆದ ದಿನ ಮಧ್ಯಾಹ್ನ ನಟ ದರ್ಶನ್ , ನಟ ಚಿಕ್ಕಣ್ಣ, ಎ3 ಆರೋಪಿ ಪವನ್ ಮತ್ತೋರ್ವ ಆರೋಪಿ ವಿನಯ್ ನ ಸ್ಟೋನಿ ಬ್ರೂಕ್ ಹೋಟೆಲ್ ನಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಅಲ್ಲಿ ಪಾರ್ಟಿ ಮುಗಿಸಿ ದರ್ಶನ್ ನೇರವಾಗಿ ಪಟ್ಟಣಗೆರೆಯ ವಿನಯ್ ಶೆಡ್ ಗೆ ತೆರಳಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆ ಪಾರ್ಟಿ ವೇಳೆ ಕೊಲೆ ಬಗ್ಗೆ ಚರ್ಚೆಯಾಗಿರುವ ಸಾಧ್ಯತೆಯಿದೆ ಎಂಬ ಬಗ್ಗೆ ಚರ್ಚೆಯಾಗಿರಬಹುದು ಎಂಬ ಶಂಕೆ ಹಿನ್ನೆಲೆ ನೋಟಿಸ್ ನೀಡಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಚಿಕ್ಕಣ್ಣಗೆ ನೋಟಿಸ್ ನೀಡಿದ್ದು ವಿಚಾರಣೆ ಹಾಜರಾಗುವಂತೆ ತಿಳಿಸಿದ್ದಾರೆ. ಈ ಬಗ್ಗೆ ಇದುವರೆಗೂ ಚಿಕ್ಕಣ್ಣ ಅವರು ಪ್ರತಿಕ್ರಿಯಿಸಿಲ್ಲ. ವಿಚಾರಣೆಗೆ ಹಾಜರಾಗುತ್ತಾರಾ ಎಂದು ಕಾದು ನೋಡಬೇಕಾಗಿದೆ.











