ಮನೆ ಪ್ರಸ್ತುತ ವಿದ್ಯಮಾನ ನಾಡದೇವತೆಯ ಮೊರೆ ಹೋಗಲಿರುವ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ

ನಾಡದೇವತೆಯ ಮೊರೆ ಹೋಗಲಿರುವ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು; ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ನಾಡದೇವತೆ ಮೊರೆ  ಹೋಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ.20 ದಿನಗಳ ಅಂತರದಲ್ಲಿ ಎರಡನೇ ಬಾರಿ ಶಕ್ತಿ‌ದೇವತೆ, ನಾಡದೇವತೆಯ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ .

ಆಗಸ್ಟ್ 10 ರಂದು ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆದಿದ್ದರು.ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಚಾಮುಂಡಿ ತಾಯಿ ಬಲಗಡೆಯಿಂದ ಹೂ ಕೊಟ್ಟಿದ್ದಳು.ನಾಳೆ ಶುಭ ಮಂಗಳವಾರ ಹಿನ್ನೆಲೆ ಸಿಎಂ  ಸಿದ್ದರಾಮಯ್ಯ ನಾಡದೇವತೆ ಚಾಮುಂಡಿ ದರ್ಶನ ಪಡೆಯಲಿದ್ದಾರೆ.ಇಂದು ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಬೇಕಾಗಿತ್ತು. ಆದರೆ ಇಂದು ನಿಗದಿಯಾಗಿದ್ದ ಕಾರ್ಯಕ್ರಮ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ದರ್ಶನ ಪಡೆದು, ಪೂಜೆ ಸಲ್ಲಿಸಿದ್ರೆ ಶುಭ ಎಂಬ ಲೆಕ್ಕಾಚಾರದಲ್ಲಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು. ಹಾಗಾಗಿ ಮುಡಾ ಸಂಕಷ್ಟದಿಂದ ಪಾರು ಮಾಡಲು ನಾಳೆ ಶಕ್ತಿ ದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಲಿದ್ದಾರೆ.ಒಳಿತಾಗಲಿದೆ ಅಂತ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರು ನಾಡದೇವತೆ ದರ್ಶನ ಪಡೆಯಲಿದ್ದಾರೆ.ಕುಟುಂಬ ಸದಸ್ಯರ ಸಲಹೆ ಮೇರೆಗೆ ನಾಳೆ‌ ಚಾಮುಂಡಿ‌ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮಂಗಳವಾರ ನಾಡದೇವತೆ ದರ್ಶನದಿಂದ ಕೃಪೆಗೆ ಒಳಗಾಹಬಹುದೆಂದು ಕುಟುಂಬ ಸದಸ್ಯರು ಸಲಹೆ ಕೊಟ್ಟಿದ್ದಾರೆ. ಹಾಗಾಗಿ ನಾಳೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿದ್ದಾರೆ. ಇನ್ನು ಇಂದು ಹೈಕೋರ್ಟ್ ನಲ್ಲಿ ಮುಡಾ ಪ್ರಕರಣ ವಿಚಾರಣೆಯಿದ್ದ ಹಿನ್ನೆಲೆ ನಾಳೆ ಚಾಮುಂಡಿ ದರ್ಶನ ಪಡೆಯಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಇನ್ನು ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು  ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.  ವಾದ ಆಲಿಸಿದ  ಹೈಕೋರ್ಟ್ ನ್ಯಾಯಪೀಠಸೆಪ್ಟೆಂಬರ್.9ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು  ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಸಿತು. ಇಂದು ದೂರುದಾರರ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ವಾದ ಮಂಡಿಸಿದರು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಾದಿಸಿದ ವಕೀಲರ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠಕ್ಕೆ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡುವಂತೆ ಎಜಿ ಮನವಿ ಮಾಡಿದರು. ಅಲ್ಲದೇ ಸಚಿವ ಸಂಪುಟದ ನಿರ್ಣಯದ ಬಗ್ಗೆ ವಾದ ಮಂಡಿಸಬೇಕಿದೆ. ಹೀಗಾಗಿ ಒಂದು ವಾರಗಳ ಕಾಲಾವಕಾಶ ಕೋರಿದರು. ಈ ವೇಳೆಯಲ್ಲಿ ಹಬ್ಬಕ್ಕೂ ಮೊದಲೇ ವಾದ ಮಂಡಿಸಿ ಮುಗಿಸಿ ಬಿಡಿ ಎಂಬುದಾಗಿ ನ್ಯಾಯಮೂರ್ತಿಗಳು ಸೂಚನೆ ನೀಡಿದರು.

ಎಜಿ ವಾದಿಸಿದ ಮೇಲೆ ತಾನು ವಾದ ಮಂಡಿಸುವುದಾಗಿ ಮುಖ್ಯಮಂತ್ರಿ ಪರ ಅಭಿಷೇಕ್ ಮನು ಸಿಂಘ್ವಿ ತಿಳಿಸಿದರು. ಸೆಪ್ಟೆಂಬರ್ 9 ಅಥವಾ 12ರಂದು ತಾನು ವಾದಿಸುವುದಾಗಿ ಹೇಳಿದರು. ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಟವು ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿತು.