ಬೆಂಗಳೂರು; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ರು. ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಚರ್ಚೆ ನಡೆಸಿದ್ರು.
ಸಭೆಯಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ಡಾ. ನಿರಂಜನಾರಾಧ್ಯ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ಇದೇ ವೇಳೆ ವ್ಯಕ್ತಿಯೊಬ್ಬರ ಮೇಲೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಘಟನೆ ನಡೆಯಿತು.ನಿಮಗೆ ಬೇರೆ ಕೆಲಸ ಇಲ್ವಾ? ಜನರಿಂದ ಅಹವಾಲು ಸ್ವೀಕಾರ ಮಾಡುವ ವೇಳೆ ವರ್ಗಾವಣೆ ಶಿಫಾರಸ್ಸು ಪತ್ರ ಸಿಎಂ ಗೆ ತೋರಿಸಿದ ವ್ಯಕ್ತಿ ಮೇಲೆ ಕೋಪಗೊಂಡಿದ್ದಾರೆ.ಬರೀ ಟ್ರಾನ್ಸಫರ್ ಗೆ ಬರ್ತಿರಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.MLA ಆಗೋದು ಟ್ರಾನ್ಸಫರ್ ಮಾಡೋಕೆನಾ ಎಂದು ಸಿಟ್ಟಾಗಿದ್ದಾರೆ ಸಿಎಂ ಸಿಟ್ಟಾಗಿದ್ದಾರೆ.ವರುಣಾ ಕ್ಷೇತ್ರದಿಂದ ವರ್ಗಾವಣೆಗಾಗಿ ಆಗಮಿಸಿದ್ದರು ವ್ಯಕ್ತಿ.ವರುಣಾ ಕ್ಷೇತ್ರದ ಶಾಸಕರೂ ಆಗಿದ್ದಾರೆ ಸಿದ್ದರಾಮಯ್ಯ.ಹೀಗಾಗಿ ಸಿಎಂ ಸಿದ್ದರಾಮಯ್ಯ ಬಳಿ ಟ್ರಾನ್ಸಫರ್ ಗಾಗಿ ವ್ಯಕ್ತಿ ಆಗಮಿಸಿದ್ದರು.
ಇನ್ನು ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ನನ್ನ ಲಿಮಿಟೇಷನ್ ಬಿಟ್ಟು ಸರ್ಕಾರದ ಮಟ್ಟದಲ್ಲಿ ಕೆಲಸ ಆಗುತ್ತೆ.ಹಾಗಾಗಿ ಸಿಎಂ ಅವರೇ ಸಂಘದ ಜೊತೆ ಅಧಿಕಾರಿಗಳು, ಬರಗೂರು ರಾಮಚಂದ್ರಪ್ಪನವರ ಜೊತೆ ಮಾತಾಡ್ತಿನಿ ಅಂತ ಹೇಳಿದ್ರು.ಸಿಎಂ ಅವರಿಗೂ ನ್ಯೂನ್ಯತೆ ಬಗ್ಗೆ ಮನವರಿಕೆಯಾಗಿದೆ.ಆದಷ್ಟು ಬೇಗ ಕಮಿಟಿ ರಚನೆ ಮಾಡಬೇಕು ಅನ್ನೊದು ನನ್ನ ಮನವಿ.ನಾಳೆ ತೀರ್ಮಾನ ತೆಗೆದುಕೊಳ್ಳೊಣಾ ಅಂತ ಹೇಳಿದ್ದಾರೆ.ಒಂದು ತಿಂಗಳು ಆಗಬಹುದು ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ.ಆದಷ್ಟು ಬೇಗ ಅನ್ಯಾಯ ಸರಿಪಡಿಸುವ ವಿಶ್ವಾಸ ಇದೆ.೧ ರಿಂದ ೭ ವರೆಗೆ ಪಾಠ ಮಾಡ್ತಿದ್ರು.ಈಗ ೧ ರಿಂದ ೫ ರವರೆಗೆ ಮಾಡಲಾಗಿದೆ.ಡಿ ಪ್ರಮೋಟ್ ತರ ಆಗಿದೆ ಅವರಿಗೆ ಬೇಜಾರಾಗಿದೆ ಎಂದಿದ್ದಾರೆ.
ಇನ್ನು ಇಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಈ ವೇಳೆ ಸಿ ಎಂ ಸಿದ್ದರಾಮಯ್ಯ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ರು.ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯರನ್ನ ನಿಯೋಗ ಭೇಟಿ ಮಾಡಿತ್ತು. ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಸಿಎಂ ಭರವಸೆ ನೀಡಿದ್ದಾರೆ.ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಲಾಗುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ರು.ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು
ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು.ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು.ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು.ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು.ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತು.











