ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೊನ್ನೆಯಷ್ಟೇ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಯಾವ ರೀತಿ ಕೊಲೆ ಮಾಡಲಾಯಿತು ಎಂಬುವುದನ್ನು ಇಂಚಿಂಚೂ ವಿವರಿಸಲಾಗಿದೆ. ಕೊಲೆಯಲ್ಲಿ ದರ್ಶನ್ ಅವ ಪಾತ್ರದ ಬಗ್ಗೆ ಎಲ್ಲವನ್ನೂ ಫೋಟೋ ಸಮೇತ ವಿವರಿಸಲಾಗಿದೆ. ದರ್ಶನ್ ರೇಣುಕಾಸ್ವಾಮಿ ಕೊಲೆಯಾದ ದಿನ ಶೆಡ್ ಗೆ ಬಂದಿದ್ದರೂ ಅನ್ನೋದಕ್ಕೆ ಎಲ್ಲಾ ರೀತಿಯ ಪೂರಕ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗಿದೆ. ಅಲ್ಲದೇ ತಮ್ಮ ಹೇಳಿಕೆಯಲ್ಲೂ ದರ್ಶನ್ ಏನೆಲ್ಲಾ ಆಯ್ತು ಅನ್ನೋದನ್ನು ಒಪ್ಪಿಕೊಂಡಿದ್ದಾರೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಡಿ ಬಾಸ್ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಯೆಸ್.. ಡಿ ಬಾಸ್ ದರ್ಶನ್ ಅವರಿಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಂತೆ ಚೆನ್ಶನ್ ಶುರುವಾಗಿದ್ದು, ಚಾರ್ಜ್ ಶೀಟ್ ಮಾಹಿತಿ ಬಹಿರಂಗ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ವಿರುದ್ಧ ಡಿ ಗ್ಯಾಂಗ್ ಮೆರೆದ ಕ್ರೌರ್ಯದ ಇಂಚಿಂಚೂ ಅನಾವರಣ;ರೇಣುಕಾಸ್ವಾಮಿ ಬಿಟ್ ಬಿಡಿ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪಟ್ಟಂತೆ ನಿನ್ನೆ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಡಿ ಗ್ಯಾಂಗ್ ರೇಣುಕಾಸ್ವಾಮಿಯನ್ನು ಯಾವ ರೀತಿ ಕೊಲೆ ಮಾಡಿದೆ ಎಂಬ ಇಂಚಿಂಚೂ ಮಾಹಿತಿ ಕೂಡ ಅನಾವರಣವಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಡಿ ಗ್ಯಾಂಗ್ ಯಾವ ರೀತಿ ಹಲ್ಲೆ ಮಾಡಿ ಕೊಲೆ ಮಾಡಿತು ಅನ್ನೋದಕ್ಕೆ ಸಂಬಂಧಪಟ್ಟಂತೆ ಫೋಟೋ ರಿವೀಲ್ ಆಗಿದೆ. ಗಡ್ಡಿ ಮನುಷ್ಯನಂತಿದ್ದ ರೇಣುಕಾಸ್ವಾಮಿ ಬಿಟ್ ಬಿಡಿ ನನ್ನ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ನೋಡಿದ್ರೇನೆ ಗೊತ್ತಾಗುತ್ತೆ. ಡಿ ಗ್ಯಾಂಗ್ ಯಾವ ರೀತಿ ಚಿತ್ರಹಿಂಸೆ ನೀಡಿ ಆತನನ್ನು ಕೊಲೆ ಮಾಡಿದೆ ಅಂತಾ.
ಈಗಾಗಲೇ ಪೊಲೀಸರು ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಪವಿತ್ರ ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಪವಿತ್ರಾಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದಕ್ಕಾಗಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಪ್ರೂವರ್ ಆಗಲು ಒಪ್ಪಿಕೊಂಡ ಆರೋಪಿಗಳಲ್ಲಿ ಒಬ್ಬ ನೀಡಿರುವ ಹೇಳಿಕೆಯನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ದರ್ಶನ್ ಮತ್ತು ಇತರೆ ಆರೋಪಿಗಳ ಪಾತ್ರದ ಬಗ್ಗೆ ಚಾರ್ಚ್ ಶೀಟ್ ನಲ್ಲಿ ವಿವರಿಸಲಾಗಿದೆ.