ಮನೆ Latest News ಡಿ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ಗಂಡು ಮಗುವಿನ ಆಗಮನ

ಡಿ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ಗಂಡು ಮಗುವಿನ ಆಗಮನ

0

ಚಿತ್ರದುರ್ಗ : ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಮನೆಯಲ್ಲಿ ಇಷ್ಟು ದಿನ ಬರೀ ಸೂತಕದ ಛಾಯೆ ಮನೆ ಮಾಡಿತ್ತು. ಆದ್ರೀಗ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅದಕ್ಕೆ ಕಾರಣ ಮೃತ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಚಿತ್ರದುರ್ಗದ ಜೆಸಿಆರ್ ಬಡಾವಣೆಯ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದು ರೇಣುಕಾಸ್ವಾಮಿ ಕುಟುಂಬಸ್ಥರಲ್ಲಿ ಸಂತಸ ಉಂಟು ಮಾಡಿದೆ.

ಇನ್ನು ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ನನಗೆ ನನ್ನ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ. ಬೆಳಗ್ಗೆ 6.55 ಕ್ಕೆ ಸಹನಾ ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ, ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.ಅಲ್ಲದೇ ಆರಂಭದಿಂದಲೂ ಸಹನಾ ಇದೇ ಆಸ್ಪತ್ರೆಯಲ್ಲಿ ಚೆಕ್ ಅಪ್ ಮಾಡಿಸಿಕೊಳ್ಳುತ್ತಿದ್ದಳು.ವೈದ್ಯರು ಹಾಗೂ ಸಿಬ್ಬಂದಿ ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಉಚಿತ ಹೆರಿಗೆ ಮಾಡಿಸಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಆಸ್ಪತ್ರೆಯ ವೈದ್ಯ ಡಾ. ಮಲ್ಲಿಕಾರ್ಜುನ್ ಮಾತನಾಡಿ ಸಹನಾ ಅವರು ಆರಂಭದಿಂದಲೇ ನಮ್ಮ ಆಸ್ಪತ್ರೆಯಲ್ಲಿ ತೋರಿಸಿಕೊಳ್ಳುತ್ತಿದ್ದರು.  ಅವರಿಗೆ ಯಾವುದೇ ರೀತಿಯ ಶುಲ್ಕವಿಲ್ಲದೇ ಉಚಿತ ಹೆರಿಗೆ ಮಾಡಲಾಗಿದೆ . ನಿನ್ನೆ ರಾತ್ರಿ ಸಹನಾ ರವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇಂದು  ಮುಂಜಾನೆ 6:55ಕ್ಕೆ ಅವರಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಿದ್ದಾರೆ. 36 ವಾರಗಳಿಗೆ  ಹೆರಿಗೆ ಆಗಿರೋದರಿಂದ ಪ್ರೀ ಮೆಚ್ಯುವರ್ ಹೆರಿಗೆ ಆಗಿದೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಮಗುವಿನ ತೂಕ ಕಮ್ಮಿ ಇರೋದರಿಂದ ಒವ್ಸರ್ವೇಶನ್ ನಲ್ಲಿ ಇಡಲಾಗಿದೆ.  ಮೂರ್ನಾಲ್ಕು ದಿನಗಳ ಬಳಿಕ ಡಿಸ್ಚಾರ್ಜ್ ಮಾಡ್ತೀವಿ ಅಂದ್ರು.

ಜಾಮೀನು ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ಭಾರೀ ನಿರಾಸೆ; ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ತೀರ್ಪು ಇಂದು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ಪರ ವಿರೋಧದ ವಾದ ಆಲಿಸಿದ ಕೋರ್ಟ್ ಇಂದು ತೀರ್ಪು ನೀಡಿದೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದ್ದು, ಜಾಮೀನು ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಭಾರೀ ನಿರಾಸೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಟ್ಟಂತೆ ಸರ್ಕಾರದ ಪರವಾದ ವಕೀಲರಾಗಿ  ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ಹಿರಿಯ ಕ್ರಿಮಿನಲ್ ಲಾಯರ್ ಸಿ.ನಾಗೇಶ್ ವಾದ ಮಂಡಿಸಿದ್ದರು. ಪದೇ ಪದೇ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗುತ್ತಲೇ ಇತ್ತು. ಅಲ್ಲದೇ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಅದರಂತೆ ಇಂದು ತೀರ್ಪು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಇಂದು ಜಾಮು ಸಿಕ್ಕೇ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ನಿರಾಸೆಯಾಗಿದೆ. ಸದ್ಯಕ್ಕಂತೂ ಜೈಲೇ ಗತಿ ಅನ್ನೋ ಹಾಗಾಗಿದೆ.