ಮನೆ Latest News ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕೆ. ಮರಿಗೌಡ‌

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕೆ. ಮರಿಗೌಡ‌

0

ಬೆಂಗಳೂರು; ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ‌ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು  ಸಿಎಂ ಸೂಚನೆ ಮೇರೆಗೆ ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್ ಗೆ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ.ವಿಕಾಸಸೌಧದಲ್ಲಿರೋ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನು ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ.ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ‌.ನನ್ನ ಆರೋಗ್ಯವು ಸರಿಯಿಲ್ಲ, ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ.ಮುಡಾ ತನಿಖೆ ನಡೆಯುತ್ತಿದೆ, ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ, ತನಿಖೆಯಿಂದ ಸತ್ಯ ಹೊರಬರುತ್ತೆ‌.ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೆ‌. ಸೈಟ್ ವಿಚಾರವಾಗಿ ಸಿಎಂ ಅವರು ಯಾವುದೇ ಒತ್ತಡ ನನ್ನ ಮೇಲೆ ಹಾಕಿಲ್ಲ.ಸಿದ್ದರಾಮಯ್ಯ ನಮ್ಮ ನಾಯಕರು, 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ.ತಾಲ್ಲೂಕು, ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಮಾಡಿದ್ರು ನನ್ನನ್ನ ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತ ಹೇಳಿಲ್ಲ.ಮುಡಾ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಒತ್ತಡ ಹಾಕಿಲ್ಲ ಎಂದಿದ್ದಾರೆ.

ಎರಡು ಬಾರಿ ಸ್ಟ್ರೋಕ್ ಆಯ್ತು, ಆರೋಗ್ಯ ಸರಿಯಿಲ್ಲ.ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗೊಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ.ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದ್ರು ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ.

ಇನ್ನು ಮುಡಾ ಅಧ್ಯಕ್ಷ ಮರಿ ಗೌಡ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಮುಡಾ ಹಗರಣ ವಿರುದ್ಧ ಬಿಜೆಪಿ ಪಾದಯಾತ್ರೆ ಯಶಸ್ವಿಯಾಗಿದೆ. ಸಿಎಂ‌ ಕುಟುಂಬ ಯಾವುದೇ ಹಗರಣ ಇಲ್ಲ ಅಂದು ಬಳಿಕ ಸೈಟ್ ವಾಪಸ್ ನೀಡಿದರು.ಈಗ ಮುಡಾ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ.ಮುಂದೆ ಮೈನ್ ವಿಕೆಟ್ ರಾಜೀನಾಮೆ ಕೊಡಲಿದ್ದಾರೆ ಎಂದರು.

ಮೊನ್ನೆ ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ನೀಡಿದ್ದಾರೆ.ಇಂತಹ ಕೇಸ್ ತನಿಖೆಗೆ ಕೊಡದೇ ಇನ್ಯಾವ ಕೇಸ್ ತನಿಖೆಗೆ ಕೊಡಬೇಕು ಅಂತ‌ ಕೋರ್ಟ್ ತನಿಖೆಗೆ ನೀಡಿದೆ.ಹಗರಣ ನಡೆಯದೇ ಇಷ್ಟೆಲ್ಲಾ ಆಗುತ್ತಿದೆಯಾ?.ಕಾಂಗ್ರೆಸ್‌ನ ಒಂದು ಗುಂಪು ಇವರ ವಿರುದ್ಧ ಇದೆ.ಹಾಗಾಗಿ ರಾಜೀನಾಮೆ ಕೊಡಿಸಿದ್ದಾರೆ ಎಂದಿದ್ದಾರೆ.

 

ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಪ್ಪೇ ಆಗಿಲ್ಲ ಎಂದು ಹೇಳಿದ್ದಾರೆ. ಉಲ್ಲಂಘನೆ ಆಗಿಲ್ಲ ಎಂದವರು ಸೈಟ್ ವಾಪಸ್ ಕೊಟ್ಟಿದ್ದಾರೆ.ಈಗ ಮುಡಾ ಅಧ್ಯಕ್ಷ ರಾಜೀನಾಮೆ ಕೊಟ್ಟಿದ್ದಾರೆ.ಇದರ ಅರ್ಥ ಅವ್ಯವಹಾರ ಅಗಿದೆ, ಜವಾಬ್ದಾರಿ ಹೊರಬೇಕು ಅಂತಾ ಅರ್ಥ ತಾನೇ? ಎಂದು ಪ್ರಶ್ನಿಸಿದ್ದಾರೆ.