ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಬಿ ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ.
ಯೂನಿಯನ್ ಬ್ಯಾಂಕ್ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು. ಈ ವೇಳೆ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. ಇದರಿಂದಾಗಿ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ;ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ರಿಲೀಸ್
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ರಿಲೀಸ್ ಆಗಿದ್ದಾರೆ.
ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನಿನ್ನೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಇಂದು ಪರಪ್ಪನ ಅಗ್ರಹಾರ ರಿಲೀಸ್ ಆಗಿದ್ದಾರೆ.
ಇನ್ನು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ನಾಗೇಂದ್ರ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಮಾಜಿ ಸಚಿವ ನಾಗೇಂದ್ರ ಮೂರು ತಿಂಗಳಿನಿಂದ ದುಷ್ಟ ರಾಜಕೀಯ ಮಾಡಿಕೊಂಡು ಬಿಜೆಪಿಯವರು ಬರ್ತಿದ್ದಾರೆ. ಬಿಜೆಪಿ ಇಡಿಯನ್ನ ಕೈ ಗೊಂಬೆ ಮಾಡಿಕೊಂಡಿದೆ.ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದೆ.ವಾಲ್ಮೀಕಿ ಹಗರಣದಲ್ಲಿ ಸಿಎಂ,ಡಿಸಿಎಂ ಹೆಸರು ಹೇಳುವಂತೆ ನನ್ನ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ರು.ಬಿಜೆಪಿಯೇತರ ಸರ್ಕಾರವನ್ನ ಟಾರ್ಗೆಟ್ ಮಾಡಲಾಗ್ತಿದೆ.ಇವತ್ತು ಬಿಜೆಪಿಯಲ್ಲಿ 66 ಜನ ಶಾಸಕರಿದ್ದಾರೆ.ಮುಂದೆ ಅದು ಇನ್ನು ಕಡಿಮೆ ಆಗುತ್ತೆ ಎಂದರು.
ನ್ಯಾಯ ಇರುತ್ತೆ ಹಗರಣದಲ್ಲಿ ನಮ್ಮ ಪಾತ್ರ ಏನು ಇಲ್ಲ.ಮುಡಾದಲ್ಲೂ ಸಹ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಇಡಿ ಬಗ್ಗೆ ದೇಶದಲ್ಲಿ ನಂಬಿಕೆ ಇದೆ.ಮುಂದಿನ ದಿನಗಳಲ್ಲಿ ನೀವೆಲ್ಲರೂ ಸಾಕ್ಷಿ ಆಗ್ತೀರಾ.ಈ ಕೇಸ್ ಬಿದ್ದು ಹೋಗುತ್ತೆ ಎಂದರು.











