ಬೆಂಗಳೂರು; ಸ್ಯಾಂಡಲ್ ವುಡ್ ನಲ್ಲಿ ಡಿವೋರ್ಸ್ ಪ್ರಕರಣದ ಬೆನ್ನಲ್ಲೇ ಇದೀಗ ಕೊಲೆ ಪ್ರಕರಣವೊಂದು ಭಾರೀ ಸದ್ದು ಮಾಡ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಮೈಸೂರಿನ ಅವರ ಫಾರ್ಮ್ ಹೌಸ್ ನಿಂದಲೇ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ. ಈಗ ದರ್ಶನ್ ಅವರನ್ನು ಬಂಧಿಸಿ ಮೈಸೂರಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ.
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.ರೇಣುಕಾ ಸ್ವಾಮಿ ಪವಿತ್ರಗೌಡಗೆ ಫೋಟೋ ಕಳುಹಿಸಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಅವರ ಆಪ್ತ ವಿನಯ್ ಅವರ ಕಾರ್ ಶೆಡ್ ಗೆ ಕರೆಸಿ ಹಲ್ಲೆ ಮಾಡಲಾಗಿದೆ. ದರ್ಶನ್ ಕೂಡ ಹಲ್ಲೆ ಮಾಡಿದ್ದು ಗಂಭೀರ ಗಾಯಗೊಂಡ ರೇಣುಕಾಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಮೃತದೇಹವನ್ನು ಸುಮನಹಳ್ಳಿ ಬ್ರಿಡ್ಜ್ ಬಳಿ ಎಸೆಯಲಾಗಿದೆ ಎನ್ನಲಾಗಿದೆ.