ಬೆಂಗಳೂರು; ತನ್ನ ಅಭಿಮಾನಿಯನ್ನು ಕೊಲೆಗೈದ ಪ್ರಕರಣದಲ್ಲಿ ಪೊಲೀಸರಿಂದ ಅರೆಸ್ಟ್ ಆಗಿರುವ ನಟ ದರ್ಶನ್ , ನಟಿ ಪವಿತ್ರ ಗೌಡ ಸೇರಿ ಒಟ್ಟು 19 ಆರೋಪಿಗಳನ್ನು ಪೊಲೀಸರು ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನ ಜಡ್ಜ್ ಮುಂದೆ ಹಾಜರು ಪಡಿಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಸ್ಥಳ ಮಹಜರು ಪ್ರಕ್ರಿಯೆ ಕೂಡ ಮುಗಿಸಿದ್ದಾರೆ. ಅಲ್ಲದೇ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಕೂಡ ಸ್ವಇಚ್ಛಾ ಹೇಳಿಕೆ ದಾಖಲಿಸಿದ್ದಾರೆ. ಹಾಗಾಗಿ ಇದೀಗ ತನಿಖೆ ಅಂತಿಮ ಹಂತ ತಲುಪಿರೋದರಿಂದ ಇಂದು ಪೊಲೀಸರು ಎಲ್ಲಾ 19 ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ಇನ್ನು ಜಡ್ಜ್ ಮುಂದೆ ಹಾಜರುಪಡಿಸಿದ ಬಳಿಕ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎನ್ನಲಾಗಿದೆ.
ಇನ್ನು ಜಡ್ಜ್ ಮುಂದೆ ಹಾಜರುಪಡಿಸುವ ಮುನ್ನ ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಇದಾದ ನಂತರ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನ ಜಡ್ಜ್ ಮುಂದೆ ಅವರನ್ನು ಹಾಜರುಪಡಿಸಲಿದ್ದಾರೆ. ಒಂದು ವೇಳೆ ಪೊಲೀಸ್ ಕಸ್ಟಡಿ. ಅವಶ್ಯಕತೆ ಇದರೆ ಪೊಲೀಸ್ ಕಸ್ಟಡಿಗೆ ನೀಡುವ ಸಾಧ್ಯತೆಯಿದೆ.
ಇದರ ಮಧ್ಯೆ ಪ್ರಕರಣದ ಕುರಿತಾಗಿ ರಾಜ್ಯ ಸರ್ಕಾರದ ಪರವಾಗಿ ವಾದ ಸಲ್ಲಿಸಲು ಎಸ್ ಪಿಪಿಯಾಗಿ ಪಿ.ಪ್ರಸನ್ನ ಕುಮಾರ್ ನೇಮಕ ಮಾಡಲಾಗಿದೆ.ಇನ್ನು ನಿನ್ನೆ ರಾತ್ರಿ ಯಾರಿಗೂ ಗೊತ್ತಾಗದಂತೆ ನಟ ದರ್ಶನ್ ಅವರನ್ನು ಅವರ ನಿವಾಸಕ್ಕೆ ಕರೆದುಕೊಂಡು ಹೋಗಿ ಸುಮಾರು 45 ನಿಮಿಷಗಳ ಕಾಲ ಸ್ಥಳ ಮಹಜರು ನಡೆಸಲಾಯಿತು. ಯಾರಿಗೂ ಗೊತ್ತಾಗದಂತೆ ದರ್ಶನ್ ಅವರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಯಿತು.