ಮನೆ Latest News ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರು ಭೇಟಿ ನೀಡುವಂತೆ ಸಿಎಂ ಸೂಚನೆ

ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರು ಭೇಟಿ ನೀಡುವಂತೆ ಸಿಎಂ ಸೂಚನೆ

0

ಬೆಂಗಳೂರು; ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರು ಭೇಟಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿ ನಮ್ಮ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಈಗಾಗಲೇ ಹೇಳಿದ್ದೇನೆ. ಮಳೆ ಅನಾಹುತ, ಭೂಮಿ ಕುಸಿತ, ಮರ ಬಿದ್ದಿರುವ ಪ್ರದೇಶ , ರಸ್ತೆ ಅಡಚಣೆಯನ್ನ ಕೂಡಲೇ ಅಟೆಂಡ್ ಮಾಡಬೇಕು ಅಂತ ಸೂಚಿಸಿದ್ದೇನೆ ಎಂದರು.

ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವರ ಜೊತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದಾರೆ. ಸಿಎಂ ಮೇ 30, 31 ರಂದು  DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ. ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ . ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು , ಮೇ 30, 31 ರಂದು  DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯಲು ಸೂಚನೆ ಕೊಟ್ಟಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ. ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ .

ಇನ್ನು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ ಹೇಳಿಕೆ ವಿಚಾರದ ಬಗ್ಗೆ ಸಿಎಂ ಮಾತನಾಡಿ ಕನ್ನಡ ಭಾಷಣೆಗೆ ದೀರ್ಘ ಕಾಲದ ಇತಿಹಾಸ ಇದೆ.ಪಾಪ ಕಮಲ್ ಹಾಸನ್ ಅವರಿಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ರು.