ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಡಹಬ್ಬ ಮೈಸೂರು ದಸರಾ ಪೂರ್ವ ಸಿದ್ದತಾ ಸಭೆ ನಡೆಯಿತು. ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ , ಸಚಿವ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್. ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್ ಖಾನ್ ಭಾಗಿಯಾಗಿದ್ದರು.
ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತನಾಡಿದ ಅವರು 2025ರ ದಸರಾ ಮಹೋತ್ಸವದ ಹೈಪವರ್ ಕಮಿಟಿ ಸಭೆ ನಡೆದಿದೆ. ಈ ಬಾರಿ ದಸರ ಮುಂಚಿತವಾಗಿ ಬಂದಿದೆ. ನವರಾತ್ರಿ 9 ದಿನಗಳ ಬದಲು ಈ ಸಾರಿ 11 ದಿನಗಳು ಆಗುತ್ತವೆ. ಅಧಿಕ ಪಂಚಮಿ ಬಂದಿರುವುದಿಂದ 11 ದಿನ ನಡೆಯುತ್ತಿದೆ. ಈ ಹಿಂದೆ 8 ಸಾರಿ 11 ದಿನ ದಸರಾ ನಡೆದಿದೆ. ಈ ಬಾರಿ ಒಳ್ಳೆಯ ಮಳೆ ಆಗಿದೆ. ಕೆರೆಕಟ್ಟೆ ,ನದಿಗಳು ತುಂಬಿವೆ. ರೈತರ ಮುಖದಲ್ಲಿ ಸಂತಸವಿದೆ. ಆದ್ದರಿಂದ ವಿಜೃಂಭಣೆಯಿಂದ ದಸರಾ ನಡೆಸುತ್ತೇವೆ ಎಂದರು. ಈ ಬಾರಿ 10ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಅರಮನೆ ಒಳಗಡೆ ಪ್ರತಿ ಸಾರಿ ದಸರ ಪ್ರಾರಂಭ ಆಗುತ್ತೆ. ನೂಕು ನುಗ್ಗಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಪೊಲೀಸರು ಜನಸ್ನೇಹಿಗಳಾಗಿ ವರ್ತಿಸುವಂತೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ವಸ್ತುಪ್ರದರ್ಶನ ಮಳಿಗಗಳಿಗೆ ಆರಂಭದ ದಿನವೇ ತುಂಬಬೇಕು. ನೂರಕ್ಕೆ ನೂರು ಆರಂಭದ ದಿನವೇ ಮಳಿಗೆಗಳು ತುಂಬಬೇಕು. ಕಳೆದ ಬಾರಿ 40 ಕೋಟಿ ಖರ್ಚಾಗಿತ್ತು.ಯಾವುದೇ ಪೆಂಡಿಂಗ್ ಬಿಲ್ ಗಳು ಇಲ್ಲ ಎಂದು ತಿಳಿಸಿದರು.
ಈ ಬಾರಿ ದೀಪಾಲಂಕಾರ 21 ದಿನ ಇರಲಿದೆ. ವಿದ್ಯುತ್ ಇಲಾಖೆಯೇ ದೀಪಾಲಂಕಾರ ವೆಚ್ಚ ಭರಿಸುವಂತೆ ಸೂಚನೆ ನೀಡಲಾಗಿದೆ. ಈ ವೇಳೆ ಚಾಮರಾಜನಗರದಲ್ಲೂ ಮಾಡುವಂತೆ ಸಚಿವ ಕೆ ವೆಂಕಟೇಶ್ ಮನವಿ ಮಾಡಿದ್ದಾರೆ. ಆಗ ಸಿಎಂ ಹೇಯ್ ಇಲ್ಲಪ್ಪ, ಅಲ್ಲಿ ಆಗಲ್ಲ ದಸರಾ ನಡೆಯೋದು ಮೈಸೂರಲ್ಲಿ ತಾನೇ. ಚಾಮರಾಜನಗರದಲ್ಲಿ ಮಾಡ್ತಾರಾ..? ಕೊಡಗಿನವರು ಕೇಳ್ತಾರೆ, ಮಂಗಳೂರಿನರವರು ಕೇಳ್ತಾರೆ ಅಲ್ಲೂ ಕೊಡೋಕೆ ಆಗುತ್ತಾ ಎಂದು ಸಚಿವರಿಗೆ ಸಿಎಂ ಪ್ರಶ್ನೆ ಮಾಡಿದರು.
ದಸರ ಉದ್ಘಾಟನೆ ಬಗ್ಗೆ ಸಲಹೆ ಗಳನ್ನು ಕೊಟ್ಟಿದ್ದಾರೆ. ಗಾಂಧಿಯ ಜಯಂತಿಯ ಮಹತ್ವ ಸಾರುವ ಟ್ಯಾಬ್ಲೋ ಗಳು ಇರುವಂತೆ ಸಲಹೆ ಬಂದಿದೆ. ಉದ್ಘಾಟನೆಗೆ ಮಹಿಳೆಯರನ್ನು ಕರೆಸಿ ಎಂದು ಪುಷ್ಪಾ ಅಮರನಾಥ್ ಸಲಹೆ ಕೊಟ್ಟಿದ್ದಾರೆ. ಉದ್ಘಾಟನೆಗೆ ಯಾರು ಮಾಡಬೇಕು ಎಂಬುದನ್ನು ನಿರ್ಧರಿಸಲು ನನಗೆ ಸರ್ವಾಧಿಕಾರ ಕೊಟ್ಟಿದ್ದಾರೆ. ಈ ಬಾರಿ ದಸರಾ ಜನರ ಮಹೋತ್ಸವ ಆಗಬೇಕು.ಜನರ ಉತ್ಸವ ಆಗಬೇಕು ಹಾಗಾಗಿ ವಿಜೃಂಭಣೆಯಿಂದ ಮಾಡುತ್ತೇವೆ ಎಂದು ತಿಳಿಸಿದರು.
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಿ.ಎಂ.ಸಿದ್ದರಾಮಯ್ಯ ಸೂಚನೆ ನೀಡಿದರು. ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು.ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ.
ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ.ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಸೆಪ್ಟಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಅಕ್ಟೋಬರ್ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. . ದಸರಾ ಈ ಬಾರಿ 10ದಿನಗಳ ಬದಲು 11 ದಿನ ನಡೆಯಲಿದೆ. ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದೆ. ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು. ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು. ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು. ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು. ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಆಗಸ್ಟ್ 4ಕ್ಕೆ ಗಜಪಯಣ ಆರಂಭವಾಗಲಿದೆ. ಸೆಪ್ಟೆಂಬರ್ 28ಕ್ಕೆ ದಸರಾ ಉತ್ಸವಕ್ಕೆ ಚಾಲನೆ ದೊರೆಯುತ್ತದೆ. ಚಾಮುಂಡಿ ಬೆಟ್ಟದ ಮೇಲೆ 10:10ಕ್ಕೆಉದ್ಘಾಟನೆಯಾಗಲಿದೆ. ಅಕ್ಟೋಬರ್ 2ಕ್ಕೆ ನಂದಿ ಧ್ವಜ ಪೂಜೆ ನಡೆಯಲಿದೆ.ಜಂಬೂ ಸವಾರಿಗೆ 4-42ರಿಂದ 5-06 ನಿಮಿಷದವರೆ ಪುಷ್ಪಾರ್ಚನೆ ನಡೆಯಲಿದೆ ಎಂದರು.