ಮನೆ Latest News 2025-26ನೇ ಸಾಲಿನ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ...

2025-26ನೇ ಸಾಲಿನ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ

0

ಬೆಂಗಳೂರು; 2025-26ನೇ ಸಾಲಿನ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್.ಕೆ. ಪಾಟೀಲ್, ಹೆಚ್.ಸಿ ಮಹದೇವಪ್ಪ, ಆರ್.ಬಿ ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ‌ ರಜನೀಶ್ ಸೇರಿ ಹಲವರು ಉಪಸ್ಥಿತರಿದ್ದರು.

ಇನ್ನು ಪರಿಶಿಷ್ಟ ಜಾತಿ & ಪಂಗಡಗಳ ದೌರ್ಜನ್ಯ ನಿಯಂತ್ರಣ ಸಭೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಚಿತ್ತಾಪುರದಲ್ಲಿ ನನ್ನ ಮೇಲೆ ನಡೆದ ಗಲಾಟೆಗರ ಮೇಲೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈವರೆಗೂ ಕ್ರಮ ಕೈಗೊಳ್ಳದ ಕುರಿತು ಸಿದ್ದರಾಮಯ್ಯಗೆ ಛಲವಾದಿ ಪ್ರಶ್ನೆ ಮಾಡಿದ್ದಾರೆ. ನನ್ನಂಥವರ ಮೇಲೆ ಈ ರೀತಿಯಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು? ಎಂದು ಛಲವಾದಿ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಸರ್ಕಾರದ ಕಂಟ್ರೋಲ್ ಅಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಎದುರೇ ಆಕ್ರೋಶ ಹೊರ ಹಾಕಿದ ಅವರು ಅಷ್ಟೇ‌ ಅಲ್ಲ, ನಿಮ್ಮ ಮೇಲೂ ಮೊಟ್ಟೆ ಎಸೆದಿದ್ದಾರೆ. ಕೊಡಗಿನಲ್ಲಿ ನಿಮ್ಮ ಕಾರಿನ ಮೇಲೆ ಮೊಟ್ಟೆ ಎಸೆದಿದ್ರು, ಕ್ರಮ ಆಯ್ತಾ ಎಂದು ಛಲವಾದಿ ಪ್ರಶ್ನೆ ಮಾಡಿದ್ದಾರೆ.

ಅನುಸೂಚಿತ ಜಾತಿ ಮತ್ತು ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು 2023 ರಿಂದ ನೇಮಕ ಮಾಡಿಲ್ಲ .ಆಯೋಗದಲ್ಲಿ ಕೇಸ್ ಗಳು ಪೆಂಡಿಂಗ್ ಇವೆ ಎಂದು ಸಭೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗ ಆಯೋಗಕ್ಕೆ ಅಧ್ಯಕ್ಷರ ನೇಮಕ ಮಾಡ್ತೇವೆ ಎಂದು ಸಿಎಂ  ವೇಳೆ ಭರವಸೆ ನೀಡಿದ್ದಾರೆ.ಇನ್ನು ಸಭೆಯಲ್ಲಿ  ಛಲವಾದಿ ನಾರಾಯಣ ಸ್ವಾಮಿಯನ್ನ ಕೂಡಿಹಾಕಿದ ಪ್ರಕರಣ ಭಾರೀ ಸದ್ದು ಮಾಡಿದೆ. ಅಷ್ಟು ದೊಡ್ಡಮಟ್ಟದ ಗಲಾಟೆ ಆಗಿಲ್ಲ ಎಂದು ಅಂದು ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಸಿಎಂ ಎದುರೇ ಸರ್ಕ್ಯೂಟ್ ಹೌಸ್ ನಲ್ಲಿ ಕೂಡಿಹಾಕಿದ್ದ ಫೋಟೋ, ಕಾರಿಗೆ ಮಸಿ ಬಳಿದ ಫೋಟೋ‌ ಪ್ರದರ್ಶಿಸಿ ಆಕ್ರೋಶ ಹೊರ ಹಾಕಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ ಮಾತುಗಳನ್ನ ಸಿಎಂ ಗಂಭೀರವಾಗಿ ಆಲಿಸಿದ್ದಾರೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ದೂರು ದಾಖಲಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 60 ದಿನಗಳೊಳಗಾಗಿ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಕಳೆದ 6 ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಸಿಎಂ ಸ್ಪಷ್ಟ ಸೂಚನೆ  ಕೊಟ್ರು. ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು.ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದೆ.ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ರು, ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮ ಎಚ್ಚರಿಕೆ.ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.