ಮೈಸೂರು: ಗೃಹ ಲಕ್ಷ್ಮೀ ದುಡ್ಡಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ ಎಂದು
ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಮಹಿಳಾ ದಸರಾ ಸಂತಸದಿಂದ ಉದ್ಘಾಟನೆ ಮಾಡುತ್ತಿದ್ದೇನೆ. ಗೃಹ ಲಕ್ಷ್ಮೀ ದುಡ್ಡಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಇಲ್ಲಿ ಕೂಡ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣದಲ್ಲಿ ಸ್ಟಾಲ್ ಇಟ್ಟಿದ್ದಾರೆ.ಸರ್ಕಾರದ ಉದ್ದೇಶ ಕೂಡ ಇದೇ ಆಗಿತ್ತು. ಹಾಗಾಗಿ ಬಹಳ ಖುಷಿಯಿಂದ ಮಹಿಳಾ ದಸರಾ ಉದ್ಘಾಟನೆ ಮಾಡಿದ್ದೇನೆ ಎಂದರು.
ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿಗಳನ್ನು ಸೇರಿಸುವ ಬಗ್ಗೆ ರಾಜಣ್ಣ ಆಕ್ರೋಶ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜಣ್ಣ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಈ ಸಂಬಂಧ ಈಗಾಗಲೇ ನಮ್ಮ ಸಿಎಂ ಡಿಸಿಎಂ ಸಭೆ ಮಾಡಿ ನಿರ್ಧಾರ ಮಾಡಿದ್ದಾರೆ.ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ನಿರ್ಧಾರ.ಯಾವುದೇ ಗೊಂದಲ್ಲ ಇಲ್ಲ. ಸಿಎಂ ಡಿಸಿಎಂ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ವಿಚಾರದ ಬಗ್ಗೆ ಮಾತನಾಡಿದ ಅವರು ಸ್ವಾಮೀಜಿಯವರು ಸಮಾಜಕ್ಕೆ ನ್ಯಾಯ ಕೊಡಸಲು ಕೆಲಸ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿಗೆ ಬಹಳಷ್ಟು ಹೋರಾಟ ಮಾಡಿದ್ದಾರೆ. ಈ ರೀತಿ ಆಗಬಾರದು. ಸಮಾಜದ ಬಾಂಧವರು ಒಟ್ಟಿಗೆ ಕೂತು ನಿರ್ಣಯ ಮಾಡುತ್ತೇವೆ ಎಂದಿದ್ದಾರೆ.
ಟ್ರಸ್ಟ್ ನವರು ಪೀಠಕ್ಕೆ ಬೀಗ ಹಾಕಿದ ವಿಚಾರದ ಬಗ್ಗೆ ಮಾತನಾಡಿದ ಅವರು ಅದರ ಬಗ್ಗೆ ನಾನು ಮಾತನಾಡಲ್ಲ. ನಮ್ಮ ಸಮಾಜಕ್ಕೆ 2A ಮೀಸಲಾತಿ ಕೊಡಿಸುವುದಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ತ್ಯಾಗವನ್ನ ಮಾಡಿದ್ದಾರೆ. ಸಮಾಜವನ್ನ ಒಂದರಡಿಗೆ ತರಲು ಪ್ರಯತ್ನ ಮಾಡಿದ್ದಾರೆ. ಇದು ಬಿಟ್ಟು ಹೆಚ್ಚೇನೂ ನಾನು ಮಾತನಾಡಲ್ಲ ಎಂದು ತಿಳಿಸಿದ್ದಾರೆ.











