ಮನೆ ಕ್ರೀಡೆ 2024ರ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಭರ್ಜರಿ ಗಿಫ್ಟ್ ನೀಡಿದ ಬಿಸಿಸಿಐ...

2024ರ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಭರ್ಜರಿ ಗಿಫ್ಟ್ ನೀಡಿದ ಬಿಸಿಸಿಐ ;125 ಕೋಟಿ ರೂ. ಬಹುಮಾನ ಘೋಷಿಸಿದ ಜಯ್ ಶಾ

0

ನವದೆಹಲಿ: 2024ರ ಟಿ20 ವಿಶ್ವಕಪ್ ಗೆದ್ದ  ಟೀಂ ಇಂಡಿಯಾಗೆ ಬಿಸಿಸಿಐ ಭರ್ಜರಿ ಗಿಫ್ಟ್ ವೊಂದನ್ನು ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಬಾಯ್ಸ್ ಗೆ   ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂಗಳ ಬಹುಮಾನ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಜಯ್ ಶಾ ಪೋಸ್ಟ್ ವೊಂದನ್ನು ಹಾಕಿದ್ದಾರೆ. ICC ಪುರುಷರ T20 ವಿಶ್ವಕಪ್ 2024 ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂಗಳ ಬಹುಮಾನ  ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಈ ಪಂದ್ಯಾವಳಿಯ ಉದ್ದಕ್ಕೂ ಟೀಂ ಇಂಡಿಯಾ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು! ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

17 ವರ್ಷಗಳ ಬಳಿಕ ವಿಶ್ವಕಪ್  ಟ್ರೋಫಿಗೆ ಮುತ್ತಿಟ್ಟ ಟೀಂ ಇಂಡಿಯಾ

ಬರೋಬ್ಬರಿ 17 ವರ್ಷಗಳ ಟೀಂ ಇಂಡಿಯಾ ಟಿ 20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಹಲವು ಭಾವನಾತ್ಮಕ ಸನ್ನಿವೇಶಗಳಿಗೆ ಪಾತ್ರವಾದ ಈ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತು.ಆ ಮೂಲಕ ದಕ್ಷಿಣ ಆಫ್ರಿಕಾ ತೀವ್ರ ನಿರಾಸೆಯನ್ನು ಅನುಭವಿಸಿತು.

ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಆಟದ ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದ್ರೆ, ಈ ಗುರಿಯನ್ನು ಬೆನ್ನತ್ತಿದ ಸೌತ್  ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿತು. 4 ರನ್ ಗಳಿಸಿದ್ದ ರೀಜಾ ಹೆಂಡ್ರಿಕ್ಸ್ ರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರೆ,  4 ರನ್ ಗಳಿಸಿದ್ದ ನಾಯಕ ಐಡೆನ್ ಮಾರ್ಕ್ರಾಮ್ ಅರ್ಷದೀಪ್ ಸಿಂಗ್ ಎಸೆತಕ್ಕೆ ಪೆವಿಲಿಯನ್ ಸೇರಿದ್ರು.

ಇನ್ನು ಅತ್ಯಂತ ತಾಳ್ಮೆಯ ಆಟವಾಡಿದಂತಹ  ಕ್ವಿಂಟನ್ ಡಿ ಕಾಕ್ 31 ಎಸೆತಕ್ಕೆ 39  ರನ್ ಗಳಿಸಿ ಪೆವಿಲಿಯನ್ ನತ್ತ ಮುಖ ಮಾಡಿದ್ರು.  ಅಕ್ಷರ್ ಪಟೇಲ್ ಬೌಲಿಂಗ್ ಗೆ 21 ಎಸೆತದಲ್ಲಿ   31 ರನ್ ಗಳಿಸಿದ್ದ ಟ್ರಿಸ್ಟಾನ್ ಸ್ಟಬ್ಸ್  ಔಟ್ ಆದರು.  ಇನ್ನು 2 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿ ಹೆನ್ರಿಚ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸಿ ಗಮನ ಸೆಳೆದರು. ಕೊನೆಗೆ ಹಾರ್ದಿಕ್ ಪಾಂಡ್ಯ ಬೌಲಿಂಗ್ ಬಲೆಗೆ ಬಿದ್ದು ಪೆವಿಲಿಯನ್ ಸೇರಿದ್ರು.

ದಕ್ಷಿಣ ಆಫ್ರಿಕಾಕ್ಕೆ ಕೊನೆಯ ಓವರ್ ನಲ್ಲಿ 16 ರನ್ ಬೇಕಾಗಿತ್ತು. ಆಗ ಡೇವಿಡ್ ಮಿಲ್ಲರ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಸಿಕ್ಸರ್ ನತ್ತ ಅಟ್ಟಿದ್ರು. ಆಗ ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಅತ್ಯಮೋಘ ಕ್ಯಾಚ್  ಭಾರತವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪತ್ರ ವಹಿಸಿತು.ಆ ಕ್ಯಾಚ್ ಅಭಿಮಾನಿಗಳಲ್ಲಿ ಮಿಂಚಿನ ಸಂಚಾರವನ್ನೇ ಮಾಡಿಸಿತ್ತು.

ಮಿಲ್ಲರ್ 21 ರನ್ ಗಳಿಸಿ ಪೆವಿಲಿಯನ್ ಗೆ ವಾಪಾಸ್ಸಾದರು. ರಬಾಡಾ ಎರಡನೇ ಎಸೆತದಲ್ಲಿ  ಬೌಂಡರಿ ಸಿಡಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಅಷ್ಟೇ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಗಳ ಅವಶ್ಯಕತೆಯಿತ್ತು.ಆಗ ಪಾಂಡ್ಯ ಒಂದು ವೈಡ್ ಎಸೆದರು. ಆಗ ರಬಾಡಾ ಕ್ಯಾಚಿತ್ತು ನಿರ್ಗಮಿಸಬೇಕಾಯಿತು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಕೊನೆಗೆ ಅಂತಿಮ ಕ್ಷಣದವರೆಗೂ ಹೋರಾಟ ನಡೆಸಿದ  ಸೌತ್ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಟೀಂ ಇಂಡಿಯಾ ಎದುರು ಮಂಡಿಯೂರಿತು. ಕೊನೆಯ ಓವರ್ ನಲ್ಲಿ ರನ್ ಗಳಿಗೆ ಬ್ರೇಕ್ ಹಾಕಿದ ಪಾಂಡ್ಯ ಕೋಟ್ಯಂತರ ಅಭಿಮಾನಿಗಳ ಪಾಲಿಗೆ ರಿಯಲ್ ಅನ್ನಿಸಿಕೊಂಡ್ರು.