ಮನೆ Latest News ಮೆಟ್ರೋ ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ: ಸಿಎಂ ಸಿದ್ದರಾಮಯ್ಯ

ಮೆಟ್ರೋ ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು; ಮೆಟ್ರೋ ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೆಟ್ರೋ ಪ್ರಯಾಣ ದರ ಏರಿಕೆಗೆ ಸ್ಪಷ್ಟನೆ  ನೀಡಿದ ಸಿಎಂ ಸಿದ್ದರಾಮಯ್ಯ ವಿಪಕ್ಷ ಗಳ ಆಕ್ರೋಶಕ್ಕೆ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ. ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುತ್ತಿದೆ. ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ.ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ.ಹೀಗಂತ ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ.  ರಾಜಕೀಯ ಕೆಸರೆರೆಚಾಟಕ್ಕಿಂತ ರಾಜ್ಯದ ಜನರಿಗೆ ಸತ್ಯ ತಿಳಿಸುವುದು ಈ ಸಂದರ್ಭದಲ್ಲಿ ಹೆಚ್ಚು ಮುಖ್ಯವಾದುದ್ದು ಎನ್ನುವುದು ನನ್ನ ಭಾವನೆ ಎಂದಿದ್ದಾರೆ.

ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಮೂಲಕ ರಚಿಸಲಾದ ಸ್ವತಂತ್ರ ದರ ನಿಗದಿ ಕಮಿಟಿ (FFC) ನಿರ್ಧರಿಸುತ್ತದೆ. ಆಕ್ಟ್ ನ ಸೆಕ್ಷನ್ 36ರ ಪ್ರಕಾರ, ದರ ನಿಗದಿ ಕಮಿಟಿಯು ನಿಗದಿತ ಅವಧಿಯೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸಬೇಕು. ಸೆಕ್ಷನ್ 37ರ ಅಡಿಯಲ್ಲಿ ಈ ಶಿಫಾರಸುಗಳು ಮೆಟ್ರೋ ಆಡಳಿತವು ಒಪ್ಪಲೇಬೇಕಿದೆ ಮತ್ತು ಜಾರಿ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಅಥವಾ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಈ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿಲ್ಲ.ಈ ದರ ನಿಗದಿ ಕಮಿಟಿಯನ್ನು ಕೇಂದ್ರ ಸರ್ಕಾರ ರಚಿಸುತ್ತದೆ, ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯವರು ನೇತೃತ್ವ ವಹಿಸಿರುತ್ತಾರೆ.ಕೇಂದ್ರದ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ . ಸಂಸತ್ತಿನಲ್ಲಿ ತಾವೇ ಈ ಶಿಫಾರಸುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಡಿ. ಈಗ ನಮ್ಮ ಸರ್ಕಾರದ ಮೇಲೆ ಬೆಲೆಯೇರಿಕೆ ನಿರ್ಧಾರದ ಆರೋಪ ಹೊರಿಸುವುದು ಅಪ್ರಾಮಾಣಿಕ ನಡೆ ಮಾತ್ರವಲ್ಲ. ಜನರನ್ನು ಉದ್ದೇಶಪೂರ್ವಕವಾಗಿ ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ. ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನದ್ದು ಎಂದಿದ್ದಾರೆ.