ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ ಅವರು ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯೂ ನಿಯಂತ್ರಣ ಆಗಲಿದೆ.ಡೆಂಗ್ಯೂ ತಡೆಗಟ್ಟದಿದ್ರೆ ಚಿಕನ್ ಗುನ್ಯಾ, ಜೀಕಾ ವೈರಸ್ ಬರಬಹುದು ಎಂದರು.
ಕೋವಿಡ್ ಪ್ಯಾಂಡಮಿಕ್ ಆಗಿದ್ದರೆ ಡೆಂಗ್ಯೂ ಎಂಡೆಮಿಕ್ ಆಗಿದೆ.ಎಂಡಮಿಕ್ ಅಂದರೆ ರಾಜ್ಯಾದ್ಯಂತ ಹರಡಿರುವುದು.ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ.ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು.ಡೆಂಗ್ಯೂಗೆ ತಪಾಸಣೆಗೆ ದರ ನಿಗದಿ ಮಾಡಿಯೂ ಡಯಾಗ್ನೋಸ್ಟಿಕ್ ಗಳಲ್ಲಿ ಹೆಚ್ಚು ವಸೂಲಿ ಮಾಡಿದರೆ ಅವುಗಳ ಬಾಗಿಲು ಮುಚ್ಚಿಸಬೇಕು ಎಂದರು.
ರಾಜ್ಯದಿಂದ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಬೇಕು.ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು.ರಾಜ್ಯ ಸರ್ಕಾರ ಮಳೆಗಾಲ ಆರಂಭವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ.ಹಾಗಾಗಿ ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕಿದೆ.ಸರ್ಕಾರ ಮತ್ತು ಸಾರ್ವಜನಿಕರು ಇಬ್ಬರದ್ದೂ ಜವಾಬ್ದಾರಿ ಇದೆ.ಡೆಂಗ್ಯೂ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ.ಶಾಲೆಗಳಿಗೆ ಸುತ್ತೋಲೆ ಹೊರಡಿಸಬೇಕು ಎಂದರು.
ಡೆಂಗ್ಯೂ ಬಂದು ಮತ್ತೆ ಹುಷಾರಾಗುವಾಗ ಪ್ಲೇಟ್ ಲೆಟ್ಸ್ ಕಡಿಮೆ ಆಗುತ್ತದೆ.ಇದರ ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ.ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೂ ನಾನು ತರಲಿದ್ದೇನೆ.ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು.ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡಾ ಎದುರಾಗಿದೆ.ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು.ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ.ಮಾಸ್ಕ್ಯೂಟೋ ರೆಫಲೆಂಟ್ಸ್ ಅಂತ ಸ್ಟಿಕ್ಕರ್ ಬರಲಿದೆ.ಅದನ್ನು ಇಲ್ಲಿಯೂ ಹಾಕಬೇಕು.ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿಯುವುದರಿಂದ ತಪ್ಪಿಸಬಹುದು.ಜಪಾನ್, ಸಿಂಗಾಪುರ ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಔಷಧ ಇದೆ.ಅವುಗಳನ್ನು ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು.ಎಲ್ಲೆಡೆ ಅರ್ಧಕ್ಕೆ ಕಾಮಗಾರಿ ನಿಂತಿರುವುದನ್ನು ಪೂರ್ಣಗೊಳಿಸಬೇಕು.ಇಲ್ಲದಿದ್ದರೆ ಅಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಬೇಕು.ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ.ಬಿಬಿಎಂಪಿ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಎಂದಿದ್ದಾರೆ.
ಚನ್ನಪಟ್ಟಣದಿಂದ ನನ್ನ ಪತ್ನಿ ಸ್ಪರ್ಧಿಸಲ್ಲ
ಇನ್ನು ಇದೇ ವೇಳೆ ಚನ್ನಪಟ್ಟಣ ವಿಧಾನಸಭೆ ಚುನಾವಣೆಗೆ ಮಂಜುನಾಥ್ ಅವರ ಪತ್ನಿ ಅನುಸೂಯ ಸ್ಪರ್ಧೆ ಮಾಡ್ತಾರೆ ಅನ್ನೋ ವದಂತಿ ಬಗ್ಗೆ ಮಾತನಾಡಿದ ಅವರು ನಾನು ಸ್ಪಷ್ಟಪಡಿಸುತ್ತೇನೆ ನೂರು ಪರ್ಸೆಂಟ್ ಅವರು ನಿಲ್ಲಲ್ಲ.ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಬಂದಿದೆ.ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಡಾ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.