ಮನೆ Latest News ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ ಗೊತ್ತಿಲ್ಲ: ಸಂಸದ...

ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ ಗೊತ್ತಿಲ್ಲ: ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ

0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ ಗೊತ್ತಿಲ್ಲ ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ  ನಾಯಕತ್ವ ಬದಲಾವಣೆ  ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನನಗೂ ಸಿಎಂ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಂಚರಾಜ್ಯ ಚುನಾವಣೆಗಳ ಎಕ್ಸಿಟ್ ಪೋಲ್ ಕುರಿತು ಮಾತನಾಡಿದ ಅವರು,  ಆಸ್ಸಾಂನಲ್ಲಿ ಮೂರನೇ ಎರಡರಷ್ಟು  ಬಹುಮತ  ನಮಗೆ ಬರಲಿದೆ. ನಮ್ಮ ನಿರೀಕ್ಷೆಯಂತೆ ಎಕ್ಸಿಟ್ ಪೋಲ್ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯವರು ಅವರು ಎಷ್ಟೆ ಸಮಸ್ಯೆ ಮಾಡಲಿ, ಏನೇ ಹಿಂಸೆ ಕೊಡಲಿ, ಜನ ಬದಲಾವಣೆ ಬಯಸಿದ್ದಾರೆ. ಅಲ್ಲಿನ ಜನ ಶೇ 90% ಮತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳ ಫಲಿತಾಂಶ ದೇಶಕ್ಕೆ ದಿಕ್ಸೂಚಿ ಆಗಲಿದೆ. ಪಂಚರಾಜ್ಯ ಫಲಿತಾಂಶ ದೇಶಾದ್ಯಂತ ಬಿಜೆಪಿ ಸಾಧನೆಯ ಹೆಜ್ಜೆ ಆಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಸಾವು ನೋವು ಸಂಭವಿಸಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಿಲ್ಲ ಇವರು ಯಾವ ತಯಾರಿಯನ್ನೂ ಮಾಡಿಲ್ಲ. ಭಾರಿ ಮಳೆ ಆಗಬಹುದು ಅಂತ ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ ಆದರೂ ಯಾವುದೇ ತಯಾರಿ ಮಾಡಿಕೊಂಡಿರಲಿಲ್ಲ. ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮಾಜಿ ಮುಖ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರ  ಅಭಿಮಾನೋತ್ಸವದ ಮೂಲಕ ರಾಜ್ಯದ ಮೂಲೆ ಮೂಲೆಗೂ ಸಂದೇಶ ಕೊಡುತ್ತೇವೆ. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಬಹಳ ದೊಡ್ಡ ರಾಜಕೀಯ ಬದಲಾವಣೆ ಆಗಲಿದೆ. ಈ ಕಾರ್ಯಕ್ರಮ ಬಿಜೆಪಿ ಆಕಾಶದತ್ತೆರಕ್ಕೆ ಹಾರುವ ಕಾರ್ಯಕ್ರಮ.  ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10  ಲಕ್ಷ ಜನ ಸೇರುವ ನಿರೀಕ್ಷೆ ಇದೆ. ದಾಖಲೆ ಪ್ರಮಾಣದಲ್ಲಿ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.