ಮನೆ Latest News ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ; ಜೆಡಿಎಸ್ ಯುವ...

ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ; ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಹೇಳಿಕೆ

0

ಮೈಸೂರು; ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ; ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮ ಯಶಸ್ವಿಯಾಗಲು ಶಾಸಕ ಹರೀಶ್ ಗೌಡ ಕಾರಣರಾಗಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ 19 ಸ್ಥಾನಗಳು ಬಂದವು. ಆದರೆ ಅದಕ್ಕೂ ಮುನ್ನಾ ಪಂಚರತ್ನ ಕಾರ್ಯಕ್ರಮದ ಮೂಲಕ ಜನರನ್ನು ತಲುಪುವ ಕೆಲಸ ವಿಫಲವಾಯಿತು. ಪರಿಣಾಮ ನಾಯಕರು ಕಾರ್ಯಕರ್ತರಲ್ಲಿ ಉತ್ಸಾಹ ಕಡಿಮೆಯಾಗಿತ್ತು. ಜೆಡಿಎಸ್ ಕೇವಲ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷ ಎನ್ನುತ್ತಿದ್ದಾರೆ. ಆದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಬಲಿಷ್ಠವಾಗಿದೆ. ಜನರೊಂದಿಗೆ ಜನತಾದಳ ಕಾರ್ಯಕ್ರಮದ ಮೂಲಕ ಗೊತ್ತಾಗಿದೆ. ಜೆಡಿಎಸ್ 25 ವರ್ಷ ಪೂರೈಸಲು ಕಾರ್ಯಕರ್ತರ ಶ್ರಮ ಕಾರಣವಾಗಿದೆ ಎಂದಿದ್ದಾರೆ.

ಕಳೆದ 25 ವರ್ಷದಿಂದ ಈ ಪಕ್ಷದಿಂದ ಶಾಸಕರು, ಸಂಸದರು, ಡಿಸಿಎಂ ಆದವರು ಪಕ್ಷ ಬಿಟ್ಟು ಹೋದರು. ಆದರೂ ಲಕ್ಷಾಂತರ ಕಾರ್ಯಕರ್ತರ ಬಲದೊಂದಿಗೆ ಜೆಡಿಎಸ್ ಈಗಲೂ ಸದೃಢವಾಗಿದೆ. ಮುಂದಿನ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳು ಮೈಸೂರು ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಲಿದ್ದಾರೆ‌. ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ. ರಾಜ್ಯದ ಜನರು ಈಗಲೂ ಕುಮಾರಣ್ಣನವರ 20 ತಿಂಗಳ ಅವಧಿಯ ಆಡಳಿತವನ್ನು ಸ್ಮರಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಎನ್ ಡಿ ಎ ಮೇಲುಗೈ ಸಾಧಿಸಲು ಕುಮಾರಣ್ಣನವರು ಮಂಡ್ಯದಿಂದ ಕಣಕ್ಕಿಳಿದಿದ್ದು ಪೂರಕವಾಗಿ ಪರಿಣಮಿಸಿತು. ಜನರೇ ನನ್ನ ನಿಜವಾದ ಆಸ್ತಿ ಎಂದು ಕುಮಾರಣ್ಣ ಭಾವಿಸಿದ್ದಾರೆ.ಪ್ರಾದೇಶಿಕ ಸಮಾನತೆ, ಸಾಮಾಜಿಕ ಸಮಾನತೆಯೊಂದಿಗೆ ಜೆಡಿಎಸ್ ಪಕ್ಷ ಎಲ್ಲಾ ವರ್ಗದ ಜನರಿಗೂ ಅವಕಾಶ ಕಲ್ಪಿಸಿದೆ ಎಂದು ಅವರು ತಿಳಿಸಿದ್ದಾರೆ.