ಬೆಂಗಳೂರು; ರಾಮನಗರ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.ಈ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿತು.12 ಶಾಸಕರಿದ್ದ ಡಿಕೆಶಿ ನೇತೃತ್ವದ ಶಾಸಕರನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿತು.
ಇನ್ನು ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ನಮ್ಮ ರಾಮನಗರ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ನನ್ನ ನೇತೃತ್ವದಲ್ಲಿ ಭೇಟಿ ಮಾಡಿದ್ದೆವು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಈ ವೇಳೆ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದ್ದೇವೆ ಎಂದರು.
ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೇ ರಾಮನಗರ ಸೇರಿತ್ತು.ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು.ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಹಮತ ವ್ಯಕ್ತಪಡಿಸಿದ್ದಾರೆ .ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಆಗಲಿದೆ.ಬಳಿಕ ಹೆಸರು ಬದಲಾವಣೆ ಆಗಲಿದೆ ಎಂದಿದ್ದಾರೆ. ಅಲ್ಲದೇ ಈಗಿರುವ ರಾಮನಗರವೇ ಹೆಡ್ ಕ್ವಾಟರ್ ಆಗಿರಲಿದೆ.ರಾಮನಗರ ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ ಎಂದರು.ಈ ವಿಚಾರವನ್ನ ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡ್ತೀವಿ ಎಂದು ಡಿಸಿಎಂ ಡಿ ಕೆ ಶಿವರುಮಾರ್ ಅವರು ಹೇಳಿದ್ದಾರೆ.
ಇನ್ನು ದೊಡ್ಡಬಳ್ಳಾಪುರ, ರಾಮನಗರ, ಚನ್ನಪಟ್ಟಣ ಮಾಗಡಿ ಎಲ್ಲಾ ಬೆಂಗಳೂರು ಜಿಲ್ಲೆಗೆ ಸೇರಿತ್ತು ನಂತರ ಆಡಳಿತ ದೃಷ್ಟಿಯಿಂದ ಬದಲಾವಣೆ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮಾಡಲಾಗಿದೆ.ರಾಮನಗರ ಜಿಲ್ಲೆ ಅಂತಾನೂ ಮಾಡಲಾಯ್ತು .ರಾಮನಗರ ಜಿಲ್ಲೆ ಹಾಗೆ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ.ವಿಶ್ವವೇ ಬೆಂಗಳೂರನ್ನ ನೋಡುತ್ತಿದೆ.ಹೆಸರು ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಕೊಡಲಾಗಿದೆ.
ರಾಮನಗರ, ಚನ್ನಪಟ್ಟಣ, ಮಾಗಡಿ ಮುಖಂಡರು ಬಂದು ನನ್ನ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಿದ್ದಾರೆ
ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕು ಎಂದು ಹೇಳಿದ್ದಾರೆ.ನಂತರ ಅಭಿವೃದ್ಧಿ ಕೆಲಸಗಳು ಕೂಡ ಬೇಗ ಆಗಲಿವೆ.ಪಕ್ಕದಲ್ಲೆ ಆಂದ್ರ, ತಮಿಳುನಾಡು ಇದೆ.ಕೈಗಾರಿಕೆಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ನಮ್ಮ ಪ್ರಯತ್ನ ಆಗ್ತಾಯಿದೆ.ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಹಾರೋಹಳ್ಳಿ ತಾಲ್ಲೂಕುಗಳನ್ನ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಲಾಗುತ್ತದೆ ಎಂದಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ತಾಂತ್ರಿಕ ವರದಿ ಬರಬೇಕಿದೆ.2032ರಷ್ಟಿಗೆ ನಾವು ರೆಡಿ ಮಾಡಬೇಕಿದೆ.ಎಂ.ಬಿ ಪಾಟೀಲ್ ಪ್ರಸ್ತಾಪ ಮಾಡಿದ್ದಾರೆ.ಅವರೆಲ್ಲ ಸರ್ವೇ ಮಾಡುತ್ತಿದ್ದಾರೆ.ಸರ್ವೇ ಮಾಡಿ 2032ಕ್ಕೆ ಅವರ ಟೈಂ ಕ್ಲೋಸ್ ಆಗಲಿದೆ. ಅಷ್ಟೊತ್ತಿಗೆ ನಾವು ಸಿದ್ದತೆ ಮಾಡಿಕೊಳ್ಳಬೇಕಿದೆ.ಬೆಂಗಳೂರಿಗೆ ನಾವು ಮುಂದೆ ಹೊಸ ಪರ್ಯಾಯ ಮಾರ್ಗ ಮಾಡಬೇಕಾಗುತ್ತೆ.ಆ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನ ರೂಪಿಸಿದ್ದೇವೆ.ಬಿಡದಿಯಲ್ಲಿದ್ದ ಪ್ಲಾನಿಂಗ್ ಅಥಾರಿಟಿಯನ್ನ ಗ್ರೇಟರ್ ಬೆಂಗಳೂರು ಪ್ಲಾನಿಂಗ್ ಅಥಾರಿಟಿ ಅಂತ ಪರಿವರ್ತನೆ ಮಾಡ್ತೀವಿ ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಇನ್ನು 1986ರಲ್ಲಿ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, , ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಗಿತ್ತು.