ಮನೆ Latest News ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

0

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪ ಅಗ್ರಹಾರ ಸೇರಿರುವ ಸೂರಜ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ ಅನ್ಸುತ್ತೆ. ಈಗಾಗಲೇ ಕೋರ್ಟ್ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶವನ್ನು ಹೊರಡಿಸಿದೆ. ಇದರ ಮಧ್ಯೆ ಸೂರಜ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಇಂದು ಎಂಲ್ಸಿ ಡಾ. ಸೂರಜ್ ರೇವಣ್ಣ ಸಲ್ಲಿಸಿದತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಈ ವೇಳೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದ ವಿಚಾರವಾಗಿದೆ ಎಂದರು. ಅಲ್ಲದೇ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹಾಗಾಗಿ ಸದ್ಯಕ್ಕಂತೂ ಸೂರಜ್ ಗೆ ಬಿಡುಗಡೆ ಭಾಗ್ಯ ಇಲ್ಲ ಅನ್ಸುತ್ತೆ. ಅತ್ತ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಈಗಾಗಲೇ ಹೈಕೋರ್ಟ್ ವಜಾಗೊಳಿಸಿದೆ.

ಏನಿದು ಪ್ರಕರಣ?

ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಫ್ ಐ ಆರ್ ದಾಖಲಿಸಿದ್ದರು. ಪೊಲೀಸ್  ಮಹಾ ನಿರ್ದೇಶಕರು, ಗೃಹಸಚಿವರಿಗೂ ದೂರು ಸಲ್ಲಿಸಿದ್ದರು.ಇದರ ಬೆನ್ನಲ್ಲೇ ಸೂರಜ್ ಆಪ್ತ ದೂರದಾರನೇ ವಿರುದ್ಧವೇ ದೂರು ದಾಖಲಿಸಿದ್ದರು.

ಡಾ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ರಿಂದ ಪೊಲೀಸರಿಗೆ ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯ ಮಾಡಿರೊದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದರುದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ್ದರು. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ.ನೀನೇ ಹೋಗಿ ಬಾಸ್ ಅನ್ನು ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ . ಹಾಗೇ ಹೋದವನು ವಾಪಾಸ್ ಬಂದು ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ಶಿವಕುಮಾರ್ ದೂರು ಕೊಟ್ಟಿದ್ದರು.

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ.ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು.ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದರು..ಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು.ನಾನೇನು ತಪ್ಪು ಮಾಡಿಲ್ಲ,ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪ ಮಾಡಿದ್ದರು.

ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದರು.. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಐದು ಕೋಟಿ ಬಳಿಕ ಮೂರು ಕೋಟಿ ,ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ ಎಂದಿದ್ದಾರೆ.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಿದ್ದರು.

ಇದದ ಬೆನ್ನಲ್ಲೇ ಸೂರಜ್ ಅರೆಸ್ಟ್ ಆಗುತ್ತಿದ್ದಂತೆ ಸೂರಜ್ ಪರವಾಗಿ ದೂರು ನೀಡಿದ್ದ ಶಿವಕುಮಾರ್ ಎಂಬಾತನೇ ನಾಪತ್ತೆಯಾಗಿದ್ದ.ಅಲ್ಲದೇ ಆ ಬಳಿಕ ಪ್ರತ್ಯಕ್ಷವಾಗಿ ಹೊಳೇನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಡಾ.ಸೂರಜ್ ರೇವಣ್ಣ  ಆಪ್ತ  3 ವರ್ಷಗಳ ಹಿಂದೆ  ನನ್ನ ಮೇಲೂ ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದ. ಅದರಂತೆ ಎಫ್‌ಐಆರ್ ದಾಖಲಾಗಿದೆ.ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 342, 506ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.