ಬೆಂಗಳೂರು; ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಪಿ.ರಾಜೀವ್ ಹೇಳಿಕೆ ನೀಡಿದ್ದಾರೆ.
ಚುನಾವಣೆಗೂ ಕೂಡ 20.29 ಕೋಟಿ ಹಣ ಬಳಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಪಿ.ರಾಜೀವ್ ಹೇಳಿಕೆ ನೀಡಿದ್ದಾರೆ.ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ.ಇಲ್ಲಿ ನಾಗೇಂದ್ರ ಅವರ ಸಂಬಂಧಿಕರು ಯಾರೂ ಚುನಾವಣೆಗೆ ನಿಂತಿಲ್ಲ.ಇಷ್ಟಿದ್ದರೂ ಹಣ ಚುನಾವಣೆಗೆ ಬಳಕೆಯಾಗಿದೆ ಅಂದಮೇಲೆ ಸಿಎಂ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮತಿ ಇಲ್ಲದೇ ಬಳಕೆ ಆಗಿದೆಯಾ?ಹೀಗಾಗಿ ಈಪ್ರಕರಣ ಮತ್ತಷ್ಟು ಆಳವಾಗಿ ತನಿಖೆ ಮಾಡಬೇಕು ಎಂದಿದ್ದಾರೆ.
ಹಾಗೆಯೇ ಅಕ್ರಮ ಹಣದಿಂದ ಆಯ್ಕೆ ಆಗಿರುವ ತುಕಾರಾಂ ಅವರನ್ನ ಅಮಾನಾತು ಮಾಡಬೇಕು.ಪ್ರಮಾಣ ವಚನ ಸ್ವೀಕರಿಸೋಕೆ ಇವರಿಗೆ ನೈತಿಕತೆ ಇಲ್ಲ.. ಅರ್ಹತೆ ಇಲ್ಲ.ಒಂದು ಕ್ಷಣವೂ ತುಕಾರಾಂ ಅವರು ಪಾರ್ಲಿಮೆಂಟ್ ನಲ್ಲಿ ಕೂರಲು ಅರ್ಹರಲ್ಲ ಎಂದಿದ್ದಾರೆ.
ಮಾಜಿ ಸಚಿವ ಬಿ ನಾಗೇಂದ್ರರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರನ್ನು ಇಂದು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಜಡ್ಜ್ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಗಜಾನನ ಭಟ್, ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಇನ್ನು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದಿದ್ದಾರೆ.
ಮಾಜಿ ಸಚಿವ ಬಿ ನಾಗೇಂದ್ರ ಅವರ ಮನೆ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ, ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಮನೆ, ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ, ಬೆಂಗಳೂರು, ಬಳ್ಳಾರಿ, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿರುವ ಇ ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯ ನಾಗೇಂದ್ರ ಫ್ಲ್ಯಾಟ್ ಮೇಲೂ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇದರ ನಡುವೆ ಬೆಂಗಳೂರು ಹಾಗೂ ರಾಯಚೂರಿನಲ್ಲಿರುವ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ಮನೆ ಮೇಲೆ ಕೂಡ ಕೂಡ ಇಡಿ ಅಧಿಕಾರಿಗಳು ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಅವರ ನಿವಾಸಕ್ಕೆ ದಾಳಿ ಮಾಡಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದದ್ದಲ್ ಅವರ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸದ ಮೇಲೂ ಕೂಡ ದಾಳಿ ನಡೆದಿದೆ.
ಇನ್ನು ನಿನ್ನೆಯಷ್ಟೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರು ನಿನ್ನೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.