ಮನೆ Latest News ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ (SAPSE) ಹಾಗೂ ರೇಬೀಸ್ ಮುಕ್ತ ಕರ್ನಾಟಕಕ್ಕಾಗಿ (SAPRE) ಕ್ರಿಯಾ...

ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ (SAPSE) ಹಾಗೂ ರೇಬೀಸ್ ಮುಕ್ತ ಕರ್ನಾಟಕಕ್ಕಾಗಿ (SAPRE) ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ

0

ಬೆಂಗಳೂರು: ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ (SAPSE) ಹಾಗೂ ರೇಬೀಸ್ ಮುಕ್ತ ಕರ್ನಾಟಕಕ್ಕಾಗಿ (SAPRE) ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್  ಚಾಲನೆ ನೀಡಿದ್ರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಚೀಪ್ ಕನ್ಸರ್ವೇಟಿವ್ ವಲ್ಡ್ ಲೈಫ್ ಕುಮಾರ ಪುಷ್ಕರ, ಆರೋಗ್ಯ ಇಲಾಖೆ ನಿರ್ದೇಶಕ ವಸಂತ ಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಮಿಶನ್ ರೇಬೀಸ್ ಮತ್ತು Human world for animals India ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2030ರ ವೇಳೆಗೆ ರೇಬೀಸ್ ಸಾವುಗಳ ಸಂಖ್ಯೆಯನ್ನು ಶೂನ್ಯಕ್ಕೆ ಇಳಿಸಲು ಗುರಿ ಹೊಂದಲಾಗಿದ್ದು. ರಾಜ್ಯ ಕ್ರಿಯಾ ಯೋಜನೆಯು ರೇಬೀಸ್ ತಡೆಗಟ್ಟುವಿಕೆಯನ್ನು ಬಲಪಡಿಸುವ ಉದ್ದೇಶ ಹೊಂದಿದೆ. ರಾಜ್ಯದ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ಲಸಿಕೆ, ರೇಬೀಸ್ ಇಮ್ಯುನೋಗ್ಲೋಬುಲಿನ್ ಒದಗಿಸಲಾಗುತ್ತದೆ. ಇವುಗಳ ದಾಸ್ತಾನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಇವು ಸದಾ ಲಭ್ಯ ಇರಬೇಕು ಮತ್ತು ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡುವುದು ಕಡ್ಡಾಯಗೊಳಿಸಲಾಗಿದೆ.ಮೇಲ್ವಿಚಾರಣೆಗಾಗಿ ರಾಜ್ಯ ಮತ್ತು ಜಿಲ್ಲಾಮಟ್ಟದ ಜಂಟಿ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತಿದ್ದು, NGO ಗಳು ಸಹ ಸಹಕಾರ ನೀಡಲಿದೆ ಎಂದರು.

ವಿಷಪೂರಿತ ಹಾವು ಕಡಿತದಿಂದ ಆಗುವ ಸಾವುಗಳನ್ನು ಕಡಿಮೆಗೊಳಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಈ ಯೋಜನೆ ರೂಪಿಸಿದ್ದು, ರಾಜ್ಯ ಸರ್ಕಾರ 2024ರಲ್ಲಿಯೇ ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಘೋಷಿತ ಕಾಯಿಲೆಯ ಪಟ್ಟಿಗೆ ಸೇರಿಸಿದೆ NGO, ನಾಗರಿಕ ಸೇವಾ ಸಂಸ್ಥೆಗಳು, ಇತರೆ ಇಲಾಖೆಗಳ ಸಹಯೋಗದಲ್ಲಿ ಮಾರ್ಗಸೂಚಿ ರಚಿಸಲಾಗಿದೆ. ಇದರಲ್ಲಿ ನಿಯಂತ್ರಣ, ಔಷಧದ ಲಭ್ಯತೆ, ತರಬೇತಿ, ಜಾಗೃತಿ ಮೂಡಿಸುವ ಕುರಿತು ಕ್ರಮ ಕೈಗೊಳ್ಳಲಾಗಿದ್ದು, ಹಾವು ಕಡಿತದಿಂದ ಉಂಟಾಗುವ ಅಂಗವಿಕಲತೆಯನ್ನು ಹೋಗಲಾಡಿಸುವುದು ಸಹ ಮುಖ್ಯ ಉದ್ದೇಶವಾಗಿದೆ.ಹಾವು ಕಡಿತಕ್ಕೂ ಸಹ ಉಚಿತ ಚಿಕಿತ್ಸೆ ನೀಡುವುದರ ಜೊತೆಗೆ, ಖಾಸಗಿ ಆಸ್ಪತ್ರೆಗಳು ಸಹ ಮುಂಗಡ ಹಣಕ್ಕೆ ಒತ್ತಾಯಿಸದೇ ಹಾವು ಕಡಿತಕ್ಕೆ ಒಳಗಾದವರಿಗೆ ತಕ್ಷಣ ಜೀವ ಉಳಿಸುವ ಚಿಕಿತ್ಸೆ ಒದಗಿಸುವಂತೆ ಆದೇಶ ನೀಡಲಾಗಿದೆ.ಒಟ್ಟಿನಲ್ಲಿ ಸರ್ಕಾರ ಆರೋಗ್ಯ ಇಲಾಖೆ ಜನರ ಆರೋಗ್ಯ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿ. ಸಕಾಲದಲ್ಲಿ ಚಿಕಿತ್ಸೆ ಸಿಗದೆ ಸಾವು ಉಂಟಾಗಬಾರದು ಎನ್ನುವ ಉದ್ದೇಶದಿಂದ ಈ ಎಲ್ಲ ಕಾರ್ಯಕ್ರಮ ರೂಪಿಸಿದೆ ಎಂದು ತಿಳಿಸಿದರು.