ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯ ಇಲ್ಲ ಅನ್ಸುತ್ತೆ.ಪ್ರಜ್ವಲ್ ರೇವಣ್ಣ ಅವರು ಮಾಡಿದ ತಪ್ಪಿನಿಂದಾಗಿ ಶಾಸಕ ರೇವಣ್ಣ ಅವರು ಕೂಡ ಜೈಲು ಸೇರುವಂತಾಯಿತು. ಇದರ ಮಧ್ಯೆ ತಾಯಿ ಭವಾನಿ ರೇವಣ್ಣ ಅವರು ಕೂಡ ಸಂಕಷ್ಟಕ್ಕೆ ಈಡಾಗಿದ್ರು. ಮತ್ತೊಂದು ಕಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ಸಹೋದರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಕೂಡ ಜೈಲು ಪಾಲಾದ್ರು.
ಇನ್ನು ಪ್ರಜ್ವಲ್ ಅರೆಸ್ಟ್ ಆಗಿ ಎರಡು ತಿಂಗಳಾಯಿತು.ಈಗಾಗಲೇ ಎರಡು ಮೂರು ಬಾರಿ ಪ್ರಜ್ವಲ್ ರೇವಣ್ಣ ಅವರು ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರಿಗೆ ಜಾಮೀನು ದೊರೆತಿಲ್ಲ. ಇದರ ನಡುವೆ ಹೈಕೋರ್ಟ್ ಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
ಪ್ರಜ್ವಲ್ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಹಾಗೇ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸರ್ಕಾರ ಕಾಲಾವಕಾಶ ಕೋರಿದರು,
ವಿಚಾರಣೆ ವೇಖೆ ಎಸ್ ಐಟಿಯ ವಿಶೇಷ ಸರ್ಕಾರಿ ಅಭಿಯೋಜಕರಾದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸೋಕೆ 2 ವಾರ ಕಾಲಾವಕಾಶ ಕೋರಿದ್ದಾರೆ. ಇನ್ನು ಪ್ರಜ್ವಲ್ ಪರ ವಾದ ಮಂಡಿಸಿದ ವಕೀಲ ಜಿ.ಅರುಣ್, ಎಸ್‌ಐಟಿ ಕೇಸ್ ಗೆ ಸಂಬಂಧಪಟ್ಟಂತೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಆದರೆ ನಮಗೆ ಆರೋಪ ಪಟ್ಟಿ ಸಿಕ್ಕಿಲ್ಲ. ಹೀಗಾಗಿ, ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರ ನಡುವೆ ಪ್ರಜ್ವಲ್ ವಿರುದ್ಧ ದಾಖಲಾದ ಬೇರೆ ಬೇರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ಈಗಾಗಲೇ ಅನೇಕ ಬಾರಿ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ ಪ್ರಜ್ವಲ್.
ಪ್ರತಿ ನಾಲ್ಕು ತಿಂಗಳಿಗೊಮ್ಮೆ HIV ಟೆಸ್ಟ್ ಮಾಡಿಸಿಕೊಳ್ತಿದ್ರಂತೆ ಮಾಜಿ ಸಂಸದ ನಾಲ್ಕು ತಿಂಗಳಿಗೊಮ್ಮೆ HIV ಟೆಸ್ಟ್ ಮಾಡಿಸಿಕೊಳ್ತಿದ್ರಂತೆ ಮಾಜಿ ಸಂಸದ
ಇನ್ನು ಪ್ರಜ್ವಲ್ ವಿಚಾರಣೆ ಹಲವು ಭಯಾನಕ ವಿಚಾರಗಳು ಬಯಲಾಗಿವೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅನೇಕ ಹೆಣ್ಣಕ್ಕಳೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದರಿಂದ ಅವರಿಗೆ ಭಯ ಕಾಡುತ್ತಿತ್ತು ಅನ್ನೋದು ಗೊತ್ತಾಗಿದೆ. ಹಾಗಾಗಿ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಮಾಡಿಸಿಕೊಳ್ಳುತ್ತಿದ್ದರು ಅನ್ನೋದು ಗೊತ್ತಾಗಿದೆ.
ಇದು ಪ್ರಜ್ವಲ್ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಅನ್ನೋ ಆರೋಪಕ್ಕೆ ಸಾಕ್ಷಿಯಂತಿದೆ. ಪ್ರಜ್ವಲ್ ಅವರ ವಿರುದ್ಧ ದಾಖಲಾದ 5 ಪ್ರಕರಣಗಳಿಗೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಾಗ ಈ ವಿಚಾರ ಗೊತ್ತಾಗಿದೆ.
ಅಂದ್ಹಾಗೆ ಸೋಮವಾರ ಪ್ರಜ್ವಲ್ ರೇವಣ್ಣ ಅವರ ತಾಯಿ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾಯಿ ಭೇಟಿ ಬಳಿಕ ಪ್ರಜ್ವಲ್ ಮಂಕಾಗಿದ್ದಾರೆ ಎನ್ನಲಾಗಿದೆ. ಇತ್ತ ಇಬ್ಬರೂ ಮಕ್ಕಳು ಜೈಲು ಪಾಲಾಗಿರೋದು ಹೆತ್ತವರನ್ನು ಕಂಗೆಡಿಸಿದೆ.











