ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ ಅನ್ಸುತ್ತೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಇಂದು ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಆದೇಶಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ಪ್ರಜ್ವಲ್ ಗೆ ಜೈಲೇ ಗತಿ ಎಂಬಂತಾಗಿದೆ.
ಇನ್ನು ವಿಚಾರಣೆ ವೇಳೆ ಪ್ರಜ್ವಲ್ ನನ್ನನ್ನು ಅಧಿಕಾರಿಗಳು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ. ಆರೋಗ್ಯ ಸಮಸ್ಯೆಯಿದ್ದರೂ ವೈದ್ಯರ ಬಳಿ ಕರೆದುಕೊಂಡು ಹೋಗಿಲ್ಲ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ನ್ಯಾಯಾಧೀಶರು ಎಸ್ ಐಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಿಳೆಯ ಅಪಹರಣ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಜಾಮೀನು
ಇನ್ನು ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.