ಮನೆ Latest News ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ; ಬಿಪಿಎಲ್ ಕಾರ್ಡ್ ರದ್ದುಗೊಂಡ ಕಾರ್ಡ್ ದಾರರ ಮನೆಗಳಿಗೆ ವಿಧಾನಸಭೆ...

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ; ಬಿಪಿಎಲ್ ಕಾರ್ಡ್ ರದ್ದುಗೊಂಡ ಕಾರ್ಡ್ ದಾರರ ಮನೆಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ

0

ಬೆಂಗಳೂರು; ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ವಿಚಾರಕ್ಕೆ ಸಂಬಂಧಪಟ್ಟಂತೆ  ಬಿಪಿಎಲ್ ಕಾರ್ಡ್ ರದ್ದುಗೊಂಡ ಕಾರ್ಡ್ ದಾರರ ಮನೆಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿದರು. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಪಿಎಲ್ ಕಾರ್ಡ್ ದಾರರ ಮನೆಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿದರು.  ಇದೇ ವೇಳೆ ಬಿಪಿಎಲ್ ಕಾರ್ಡ್ ರದ್ದುಗೊಂಡ ಕಾರ್ಡ್ ದಾರರು  ಕಾರ್ಡ್ ರದ್ದತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕಾರ ಮಾಡಿದರು.

ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಬಿಪಿಎಲ್ ಕಾರ್ಡ್ ಅನರ್ಹತೆ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಶಾಸಕರಾದ ಡಾ. ಅಶ್ವಥ್ ನಾರಾಯಣ ಮತ್ತು ಕೆ. ಗೋಪಾಲಯ್ಯ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಸಾಥ್ ನೀಡಿದರು.

ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ; ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆಯೇ? ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ. ಆದಾಯ ತೆರಿಗೆ ಪಾವತಿಸುವವರ ಬಳಿ, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್ ಇರಬೇಕ? ಅರ್ಹರ ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು. ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಆರೋಪ ಸಾಬೀತಾಗಿಲ್ಲ. ಕೆಲವೊಮ್ಮೆ ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ ಆದರೆ ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ. ಇದೂ ಹಾಗೆಯೇ  ಎಂದಿದ್ದಾರೆ.