ಮನೆ Latest News ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ‌ನಡೆಯುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ‌ನಡೆಯುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

0

ಬೆಂಗಳೂರು; ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ‌ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕಲ್ಬುರ್ಗಿ ‌ಲಾಡ್ಲೆ ಮಶಾಕ್ ದರ್ಗಾ ಪ್ರಕರಣ ವಾಪಸ್ ವಿಚಾರದ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ‌ನಡೆಯುತ್ತಿದೆ. ಅಲ್ಪಸಂಖ್ಯಾತರ ಓಲೈಕೆಗೆ ಯಾವ ಮಟ್ಟಕ್ಕಡ ಹೋಗುತ್ತಾರೆ ಎಂಬುದಕ್ಕೆ ಉದಾಹರಣೆ. ಹಿಂದೂ-ಮುಸಲ್ಮಾನರ ನಡುವೆ ಸೌಹಾರ್ದ ಕದಡುವ ನೀಚ ಕೆಲಸ ಮಾಡಿದವರ ವಿರುದ್ಧ ಕೇಸ್ ವಾಪಸ್ ಪಡೆಯುವ ಕೆಲಸ ಮಾಡಿದೆ. ವೋಟ್ ಬ್ಯಾಂಕ್ ಸುಭದ್ರಗೊಳಿಸಲು ಪದೇ ಪದೇ ಈ ರೀತಿಯ ನಿರ್ಧಾರ ಆಗುತ್ತದೆ. ಹಿಂದೂ ವಿರೋಧಿ ನೀತಿ ವಿರುದ್ಧ ಬಿಜೆಪಿ ಬೀದಿಗಳಿದು ಹೋರಾಟ ಮಾಡುತ್ತದೆ ಎಂದಿದ್ದಾರೆ.

ಆನೇಕಲ್ ನಲ್ಲಿ ಕ್ರಿಕೆಟ್ ಸ್ಟೇಡಿಯಂ ವಿಚಾರದ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ, ಕಾಂಗ್ರೆಸ್ ಗೆ ರೈತರ ವಿಚಾರದಲ್ಲಿ ಯಾಕೆ ಇಷ್ಟು ಕೋಪ ಎಂದು ಅರ್ಥ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಸಾವಿರಾರು ಎಕರೆ ಒಕ್ಕಲೆಬ್ಬಿಸಿ ರೈತರಿಗೆ ತೊಂದರೆ ಕೊಡುತ್ತಿದೆ. ರಿಯಲ್ ಎಸ್ಟೇಟ್ ಗೆ ಕಾಂಗ್ರೆಸ್ ಸರ್ಕಾರ ಇಳಿದಿದೆ. ರೈತರ ಪರವಾಗಿ ಬಿಜೆಪಿ ಇರಲಿದೆ, ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.

ನಾಳೆ ಕೋರ್ ಕಮಿಟಿ ಸಭೆ ಕೂಡಾ ಇರಲಿದೆ. ನಂತರ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆಯ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದ ಅವರು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಮಾತನಾಡಿ ಬಿಜೆಪಿಗೆ ಒಂದೇ ಸ್ಥಾನದ ಅವಕಾಶ ಇದೆ. ದೇವೇಗೌಡರಿಗೆ ಬಿಜೆಪಿ ವಿರೋಧ ಮಾಡಿದೆ ಎಂಬ ವಿಚಾರ ಸತ್ಯಕ್ಕೆ ದೂರ. ಪ್ರೀತಂ ಗೌಡ ಅವರನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು ಹೇಳುತ್ತಿದ್ದೇನೆ. ಎನ್ ಡಿಎ ಬಲಪಡಿಸಲು ದೇವೇಗೌಡರು ಶಕ್ತಿ ತುಂಬಿದ್ದಾರೆ.ಕೋರ್ ಕಮಿಟಿಯಲ್ಲಿ ರಾಜ್ಯಸಭೆಗೆ ಎರಡು ಹೆಸರು, ವಿಧಾನ ಪರಿಷತ್ ಗೆ ನಾಲ್ಕು ಹೆಸರು ಕಳುಹಿಸಬೇಕು ಎಂದು ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿದ್ದೇವೆ. ಇನ್ನೂ ಕೂಡಾ ಹೈಕಮಾಂಡ್ ನಿಂದ ನಾವು ಯಾವುದೇ ಸಂದೇಶ ಸ್ವೀಕರಿಸಿಲ್ಲ. ಎಲ್ಲವನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಆಗಿದೆ. ಸಿದ್ದರಾಮಯ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲಿ .ರಾಷ್ಟ್ರೀಯ ನಾಯಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಒಂದು ಕಿವಿಮಾತು ಹೇಳುತ್ತೇನೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ ವಿಚಾರ ಬದಿಗಿಟ್ಟು ಈ ರಾಜ್ಯದ ಬಗ್ಗೆ ನಿರ್ಧಾರ ಮಾಡಿ ದೇಶಕ್ಕೆ ಮಾದರಿಯಾಗುವ ನಿರ್ಧಾರ ಮಾಡಲಿ. ನಿಮ್ಮ ಮುಖ್ಯಮಂತ್ರಿಗಳಿಗೆ ಮೊದಲು ಬುದ್ದಿ ಹೇಳಿ ಎಂದಿದ್ದಾರೆ.