ಕೊಪ್ಪಳ; ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ವಿಜಯನಗರ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಇಂದು ಜಲಾಶಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್ , ಮಾಜಿ ಸಚಿವರಾದ ಶ್ರೀ ಆನಂದ್ ಸಿಂಗ್, ಶ್ರೀ ಹಾಲಪ್ಪ ಆಚಾರ್, ಮಾಜಿ ಸಂಸದರಾದ ಶ್ರೀ ಶಿವರಾಮೇಗೌಡ, ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀಮತಿ ಹೇಮಲತಾ ನಾಯಕ್, ಮಾಜಿ ಶಾಸಕರಾದ ಶ್ರೀ ಬಸವರಾಜ ದಡೇಸುಗೂರು, ಮುಖಂಡರಾದ ಶ್ರೀ ಬಸವರಾಜ ಕ್ಯಾವಟರ್, ಶ್ರೀ ಸುರೇಶ್ ಬಾಬು, ಶ್ರೀ ಸಿದ್ಧಾರ್ಥ ಸಿಂಗ್, ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿದರು .
ಈ ವೇಳೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಘಟನೆಯಿಂದಾಗಿ ತುಂಗಭದ್ರಾ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳ ಜನಸಾಮಾನ್ಯರು ಪ್ರವಾಹ ಎದುರಾಗುವ ಆತಂಕದಲ್ಲಿದ್ದಾರೆ. ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆ ಎದುರಾಗುವ ಆತಂಕದಲ್ಲಿದ್ದಾರೆ.ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ಅವರು ಘಟನೆ ಬಗ್ಗೆ ಡಿಸಿಎಂ, ಜಲಸಂಪನ್ಮೂಲ ಸಚಿವರು ಆಗಿರುವ ಡಿ ಕೆ ಶಿವಕುಮಾರ್ ಅಧಿಕಾರಿಗಳ ಪರವಾಗಿಯೇ ಮಾತನಾಡಿದ್ದಾರೆ. ಯಾವ ಅಧಿಕಾರಿಯನ್ನು ಕೂಡ ಅವರು ಹೊಣೆಗಾರಿಕೆ ಮಾಡಿಲ್ಲ. ಅಲ್ಲದೇ ಒಂದು ವರ್ಷದಿಂದ ತುಂಗಭದ್ರಾ ಡ್ಯಾಂಗೆ ಚೀಪ್ ಇಂಜಿನಿಯರ್ ನೇಮಕ ಮಾಡಿಲ್ಲ. ತುಂಗಭದ್ರಾ ಡ್ಯಾಂಗೆ ಯಾಕೆ ಚೀಪ್ ಇಂಜಿನಿಯರ್ ನ್ನು ಸರ್ಕಾರ ನೇಮಕ ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಜಲಸಂಪನ್ಮೂಲ ಸಚಿವರಾದವರು ಕರುನಾಡಿನ ನೆಲ, ಜಲವನ್ನು ಕಾಪಾಡಬೇಕಿದೆ. ಆದರೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೆಲ ಜಲಕ್ಕಿಂತ ಸಂಪನ್ಮೂಲದ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿರುವ ಪ್ರಕರಣ; ವಿಜಯನಗರದ ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಪರಿಶೀಲನೆ
ವಿಜಯನಗರದಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ಟಾದ ಪರಿಣಾಮ ಗೇಟ್ ಮೂಲಕ ಅಪಾರ ಪ್ರಮಾಣದ ನೀರು, ನದಿ ಪಾತ್ರಕ್ಕೆ ಹರಿದು ಅವಾಂತರ ಸೃಷ್ಟಿಯಾಗಿದೆ. ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ಟಾಗಿದೆ. ಇದರಿಂದಾಗಿ ನದಿ ಪಾತ್ರದ ಜನರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರೋದರಿಂದ ಅಪಾರ ಪ್ರಮಾಣದ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿದೆ.
ಜಲ ಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಜಯನಗರದ ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಘಟನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಬೋಸರಾಜ್, ಸಂಸದ ತುಕಾರಾಂ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಗವಿಯಪ್ಪ, ಮಾಜಿ ಸಚಿವ ಆನಂದ್ ಸಿಂಗ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.











