ಮನೆ ಪ್ರಸ್ತುತ ವಿದ್ಯಮಾನ ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣ; ಶಾಸಕ ಹೆಚ್ ಡಿ ರೇವಣ್ಣಗೆ ಬಿಗ್...

ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣ; ಶಾಸಕ ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್

0

ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯನ್ನು ರದ್ದುಗೊಳಿಸುವಂತೆ ಕೋರಿ ಎಸ್ ಐಟಿ ಅಧಿಕಾರಿಗಳು ಹೈಕೋರ್ಟ್ ಗೆ ಮನವಿಯನ್ನು ಸಲ್ಲಿಸಿದ್ದರು. ಎಸ್ ಐಟಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಸತೀಶ್ ಬಾಬು, ಕೆ ಎ ರಾಜಗೋಪಾಲ್, ಎಚ್ ಕೆ ಸುಜಯ್, ಮಧು ಗೌಡ, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.ಈ ಮೂಲಕ ಪ್ರಕರಣದಲ್ಲಿ ಶಾಸಕ ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

ಏನಿದು ಪ್ರಕರಣ?

ಹಾಸನ ಪೆನ್ ಡ್ರೈವ್ ಪ್ರಕರಣ ಬಯಲಾಗುತ್ತಿದ್ದಂತೆ ಪ್ರಜ್ವಲ್ ಅವರ ಅಶ್ಲೀಲ ವೀಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದಾರೆ ಎಂದು ಆಕೆಯ ಪುತ್ರ ಮೇ 4 2024 ರಂದು ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.ರೇವಣ್ಣ ಅವರ ಮನೆಯಲ್ಲಿ ನನ್ನ ತಾಯಿ ಕೆಲಸ ಮಾಡುತ್ತಿದ್ದರು. ಆಕೆಯನ್ನು ಏ.29 ರಂದು ರೇವಣ್ಣ ಅವರ ಸೂಚನೆಯಂತೆ ಸತೀಶ್ ಬಾಬು ಎಂಬವರು ರೇವಣ್ಣ ಅವರು ಬರಲು ಹೇಳಿದ್ಜಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ.ಆ ಬಳಿಕ ಆಕೆ ನಾಪತ್ತೆಯಾಗಿದ್ದಾರೆ ಎಂದು ಮಗ ದೂರು ನೀಡಿದ್ದ.ಇದಾದ ಒಂದು ವಾರದ ಬಳಿಕ  ಮಹಿಳೆಯನ್ನು ಹುಣಸೂರಿನಿಂದ 14 ಕಿ.ಮೀ ದೂರದಲ್ಲಿರುವ ಕಾಳೇನಹಳ್ಳಿರುವ ರೇವಣ್ಣ ಆಪ್ತ ರಾಜ್ ಗೋಪಾಲ್  ಎಂಬವರ ತೋಟದ ಮನೆಯಲ್ಲಿ ಆಕೆಯನ್ನು ಎಸ್ ಐಟಿ ತಂಡ ಪತ್ತೆ ಮಾಡಿತ್ತು.

ಇನ್ನು ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಕೋರಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಮೇ 4 ರಂದು ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಅವರು ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್ ಡಿ ದೇವೇಗೌಡ ನಿವಾಸದಿಂದಲೇ ಎಸ್ ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಬಳಿಕ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿಲಾಗಿತ್ತು. ಅದರಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಮೇ 14 ರಂದು ರೇವಣ್ಣ ಅವರಿಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.ಅದರಂತೆ 11 ದಿನಗಳ ಸೆರೆಮನೆ ವಾಸದ ಬಳಿಕ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದರು.