ಮನೆ Latest News ಮೂರನೇ ದಿನ ಪೂರೈಸಿದ ಬಿಜೆಪಿ ಜೆಡಿಎಸ್ ಪಾದಯಾತ್ರೆ; ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತೆ ಸಾವು, ಬಿಜೆಪಿ...

ಮೂರನೇ ದಿನ ಪೂರೈಸಿದ ಬಿಜೆಪಿ ಜೆಡಿಎಸ್ ಪಾದಯಾತ್ರೆ; ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತೆ ಸಾವು, ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥ

0

ರಾಮನಗರ; ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯು ಮೂರನೇ ದಿನ ಪೂರೈಸಿದೆ.  3ನೇ ದಿನವಾದ ಇಂದು ಬೆಳಗ್ಗೆ ರಾಮನಗರ ಬಳಿಯ ಕೆಂಗಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ದಿ.ಕೆಂಗಲ್ ಹನುಮಂತಯ್ಯ ಅವರ ಸಮಾಧಿಗೆ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು ನಮನ ಸಲ್ಲಿಸುವ ಮೂಲಕ ಮೂರನೇ ದಿನದ ಪಾದಯಾತ್ರೆ ಆರಂಭವಾಯಿತು.

ಅಲ್ಲದೇ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ನಾಯಕರು ರಾಮನಗರದ ಐತಿಹಾಸಿಕ ಕೆಂಗಲ್ ಹನುಮಂತರಾಯ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಗಳಾದ ಅಶ್ವತ್ಥ್ ನಾರಾಯಣ,

, ಮಾಜಿ ಸಚಿವರಾದ ಶ್ರೀ ಸಿ.ಸಿ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ , ಶಾಸಕರಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇನ್ನು ಪಾದಯಾತ್ರೆ ಚನ್ನಪಟ್ಟಣದಲ್ಲಿ ಸಾಗುತ್ತಿದ್ದ ವೇಳೆ ಬೆಂಗಳೂರಿನ ಬಿಜೆಪಿ ಜಯನಗರ ಮಂಡಳ ಉಪಾಧ್ಯಕ್ಷ ಶಂಕರ್ ಅಸ್ವಸ್ಥರಾದರು. ಕೂಡಲೇ ಆಂಬ್ಯುಲೆನ್ಸ್ ಮೂಲಕ ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕೂಡಲೇ

ಆಸ್ಪತ್ರೆಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಕೆ. ರಾಮಮೂರ್ತಿ ಮತ್ತು ರವಿಸುಬ್ರಮಣ್ಯ, ಅವರು ಶಂಕರ್ ಅವರ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬಿದರು.ಅಲ್ಲದೇ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

ಇದರ ಮಧ್ಯೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಬೆಂಗಳೂರಿನ ಬನಶಂಕರಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಮಂಜುನಾಥ ಕಾಲೋನಿಯ ನಿವಾಸಿಯಾಗಿರುವ ಗೌರಮ್ಮ ಬಿಜೆಪಿಯ ಸಕ್ರೀಯ ಕಾರ್ಯಕರ್ತೆಯಾಗಿದ್ದರು. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದೆ. ಬಳಿಕ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಗೌರಮ್ಮ ಅವರ ಮೃತದೇಹ ಸಾಗಿಸಲಾಯಿತು. ಈ ವೇಳೆ

ಆಸ್ಪತ್ರೆಗೆ ಭೇಟಿ ನೀಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗೌರಮ್ಮ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಮೂರನೇ ಪಾದಯಾತ್ರೆ ಇಂದು ಮದ್ದೂರು ತಾಲೂಕಿನ ನಿಡಘಟ್ಟದಲ್ಲಿ ಕೊನೆಗೊಂಡಿದೆ. ನಾಳೆ ಬೆಳಗ್ಗೆ ಇಲ್ಲಿಂದ ಪಾದಯಾತ್ರೆ ಮುಂದುವರೆಯಲಿದೆ.