ಮನೆ Latest News ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ :ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್...

ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ :ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ

0

ಬೆಂಗಳೂರು; ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಯಿತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪೋಸ್ಟರ್ ಅಭಿಯಾನ ನಡೆಯಿತು.

ಗುತ್ತಿಗೆದಾರನ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಜವಾಬ್ದಾರಿ ಎಂದು ಪೋಸ್ಟರ್ ಹಿಡಿದು ಪ್ರಿಯಾಂಕ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ರು.

ಪೊಲೀಸರು ಪೋಸ್ಟರ್ ಅಂಟಿಸಿದ ಕೂಡಲೇ ಪೋಸ್ಟರ್ ಕಿತ್ತು ಹಾಕಿ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆಯಲು ಯತ್ನಿಸಿದರು. ಎಂಎಲ್ಸಿ ರವಿಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಸೇರಿದಂತೆ  ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆಯಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರ ಕೈಯಿಂದ ಪೋಸ್ಟರ್ ಕಿತ್ತುಕೊಳ್ಳಲು ಪೊಲೀಸರು ಯತ್ನಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿ ಹೈಡ್ರಾಮಾ ನಡೆಯಿತು.ಪ್ರತಿಭಟನೆಯಲ್ಲಿ ಎಂಎಲ್ಸಿ ಸಿ.ಟಿ. ರವಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ  ನಾರಾಯಣಸ್ವಾಮಿ ಭಾಗಿಯಾಗಿದ್ದರು.

ಮಧ್ಯ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಕಿತ್ತುಕೊಳ್ಳಲು ಪೊಲೀಸರು ಯತ್ನಿಸಿದ್ದರಿಂದ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಬಿಜೆಪಿ ನಾಯಕರು ಮುಂದೆ ನುಗ್ಗದಂತೆ ಪೊಲೀಸರು ಹೊಯ್ಸಳ ವಾಹನ ಅಡ್ಡಲಾಗಿರಿಸಿದ್ದರು.ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಗಳಾದ ಸಿ.ಟಿ. ರವಿ, ಎನ್. ರವಿಕುಮಾರ್, ಬಿಜೆಪಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಇದೇ ವೇಳೆ ವಶಕ್ಕೆ ಪಡೆದರು.ಈ ವೇಳೆ ಪೊಲೀಸ್ ವಾಹನಕ್ಕೂ ಪೋಸ್ಟರ್ ಅಂಟಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ‌ ಹೊರ ಹಾಕಿದ್ರು.

ಇನ್ನು ಅತ್ತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ಹಿನ್ನಲೆ  ಸಚಿವ ಖರ್ಗೆ ಸರ್ಕಾರಿ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್ ನಲ್ಲಿರುವ ಸರ್ಕಾರಿ ನಿವಾಸಕ್ಕೆ ಭದ್ರತೆ ಒದಗಿಸಲಾಗಿತ್ತು. ರೇಸ್ ವ್ಯೂ ಕಾಟೇಜ್ ಗೆ ತೆರಳುವ ರಸ್ತೆಯ ಗೇಟ್ ಬಂದ್ ಮಾಡಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದರು.ಇನ್ಸ್ ಪೆಕ್ಟರ್ ಗಳು ಸೇರಿದಂತೆ ಸ್ಥಳದಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದರು.