ಬೆಂಗಳೂರು; ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ವಿಚಾರಕ್ಕೆ ಟ್ವೀಟ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವಕ್ಕೆ ಬಿಜೆಪಿ ಸದಾ ಬದ್ಧ. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು ಎಂಬ ನೀತಿ ಅನುಸರಿಸಲು ಹೊರಟಿದೆ.ಕುವೆಂಪು ಅವರು ಕಲ್ಪಿಸಿದ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡಲು ಹೊರಟಿದೆ.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಅಪಚಾರವಾದರೂ ಸರಿ.ನಾವು ಅಧಿಕಾರ ದಲ್ಲುಳಿಯಲು ಮುಸ್ಲಿಂ ಸಮುದಾಯವನ್ನು ಓಲೈಸುವುದೇ ನಮ್ಮ ಹೆಗ್ಗುರಿ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದುಬಿಟ್ಟಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿ ಹಂಚುವಲ್ಲಿಯೂ ಶೇ.4 ಮೀಸಲಾತಿ ನಿಗದಿಪಡಿಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸಿದೆ.ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ. ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವಲ್ಲ, ಕ್ರೈಸ್ತರು, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ ಎಂದು ಹೇಳಿದ್ದಾರೆ. ಇದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ’ ಎಂಬಂತೆ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರೂ ಸೇರಿದಂತೆ ಇತರ ಧಾರ್ಮಿಕ ಅಲ್ಪಸಂಖ್ಯಾತರೆಲ್ಲರಿಗೂ ಸಮಾನವಾಗಿ ಹಕ್ಕು, ಸವಲತ್ತುಗಳು ಹಂಚಿಕೆಯಾಗಬೇಕು.ಆದರೆ ಸಾಮಾಜಿಕ ನ್ಯಾಯದ ಬಗ್ಗೆ ಬೊಬ್ಬೆ ಹೊಡೆಯುವ ಕಾಂಗ್ರೆಸ್ ತನ್ನ ಆಡಳಿತದ ರಾಜ್ಯ ಸರ್ಕಾರದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಮೆಟ್ಟಿ ನಿಂತು ಮುಸ್ಲಿಂ ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವುದು ಸಂವಿಧಾನಕ್ಕೆ ದ್ರೋಹ ಬಗೆದಂತಾಗಿದೆ. ಪ್ರಗತಿಪರರೆಂದು ಸ್ವಯಂ ಬಿಂಬಿಸಿಕೊಂಡು ಕಾಂಗ್ರೆಸ್ ಓಲೈಸುವ ಚಿಂತಕರು.ಸಾಹಿತಿಗಳು ಇಂತಹ ಸಾಮಾಜಿಕ ಅನ್ಯಾಯ ಹಾಗೂ ಸಾಮರಸ್ಯ ಕದಡುವ ಸರ್ಕಾರದ ನಿಲುವನ್ನು ನೋಡಿಯೂ ಕಣ್ಣು, ಕಿವಿ ಮುಚ್ಚಿಕೊಂಡಿದ್ದಾರೆ.ಇವರ ದೃತರಾಷ್ಟ್ರ ಧೋರಣೆ ನಮ್ಮದೇನಿದ್ದರೂ ಕಾಂಗ್ರೆಸ್ ಪರವಾದ ನಿಲುವನ್ನು ಪ್ರತಿಪಾದಿಸುವುದು ಮಾತ್ರ ಇದೆ. ನಮ್ಮ ಪ್ರಗತಿಪರ ಚಿಂತನೆ ಹಾಗೂ ಹೋರಾಟ ಎಂದು ತಮ್ಮ ಅಸಲಿ ಮುಖವಾಡವನ್ನು ಅನಾವರಣ ಮಾಡಿಕೊಂಡಿದ್ದಾರೆ.ಬಿಜೆಪಿ-ಕರ್ನಾಟಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ .ನಮ್ಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆ ಎಂದಿದ್ದಾರೆ.
ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಕ್ಕೆ ಸದನದ ಒಳಗೆ, ಹೊರಗೂ ಹೋರಾಟ ಮಾಡ್ತೀವಿ;: ರಾಜ್ಯ ಬಿಜೆಪಿ ಕಚೇರಿಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ಬೆಂಗಳೂರು; ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಕ್ಕೆ ಸದನದ ಒಳಗೆ, ಹೊರಗೂ ಹೋರಾಟ ಮಾಡ್ತೀವಿ ಎಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ವಿಚಾರದ ಬಗ್ಗೆ ಮಾತನಾಡಿದ ಅವರು ಈಗಾಗಲೇ ಮುಸ್ಲಿಂಮರಿಗೆ 4% ಮೀಸಲಾತಿ ಈ ಹಿಂದೆ ಇತ್ತು. ಧಾರ್ಮಿಕ ಮೀಸಲಾತಿ ಕೊಡೋಕೆ ಸಾಧ್ಯ ಇಲ್ಲ. ಆ ರೀತಿ ಧಾರ್ಮಿಕ ಮೀಸಲಾತಿ ಕೊಟ್ಟರೆ ಸಂವಿಧಾನ ವಿರೋಧಿ ನಡೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಈ ಮೀಸಲಾತಿ ಹಿಂದೆ ಪಡೆಯಲಾಗಿತ್ತು.. ಕಾಂಗ್ರೆಸ್ ಬಂದ್ಮೇಲೆ ಧಾರ್ಮಿಕ ಮೀಸಲಾತಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಗುತ್ತಿಗೆಯಲ್ಲಿ 4% ಮೀಸಲಾತಿ ಕಾನೂನು ಬಾಹಿರ. ರಾಷ್ಟ್ರೀಯ ನಾಯಕರು ಇದಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಸದನದ ಒಳಗೆ, ಹೊರಗೂ ಹೋರಾಟ ಮಾಡ್ತೀವಿ ಎಂದಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ವೋಟ್ ಬ್ಯಾಂಕಿಂಗ್ ಯಥಾಸ್ಥಿತಿಯಾಗಿ ಉಳಿಸಿಕೊಳ್ಳಲು ಹೊರಟಿದೆ. ಮುಸಲ್ಮಾರಿಂದಲೇ ದೇಶಕ್ಕೆ ಗಂಡಾಂತರ ಅಂತ ನಾನು ಹೇಳೊಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಇರುವವರಿಂದ ದೇಶಕ್ಕೆ ಕಂಟಕ ಇದೆ. ಬಿಡದಿಯಲ್ಲಿ ದೇಶ ವಿರೋಧ ಬರಹ ಪತ್ತೆ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಇಂದು ಕಾನೂನು ಸುವ್ಯವಸ್ಥೆ ಕೆಟ್ಟಿದೆ. ತನ್ನದೇ ಆದ ಶಕ್ತಿ ಕೆಲವರಿಗೆ ಬಂದಿದೆ. ಸರ್ಕಾರ ತನ್ನ ಕಾರ್ಯಕರ್ತರನ್ನ ಕಾಪಾಡಿಕೊಳ್ಳಬೇಕು.ಕಾರ್ಯಕರ್ತರ ಜೇಬು ತುಂಬಬೇಕು ಅಂತ ದೇಶ, ರಾಜ್ಯಕ್ಕಿಂತ ಕಾರ್ಯಕರ್ತರೇ ಹೆಚ್ಚು ಅಂತ ಹೊರಟಿದೆ ಎಂದರು.
ಒಳ ಮೀಸಲಾತಿ ಜಾರಿ ವಿಚಾರದ ಬಗ್ಗೆ ಮಾತನಾಡಿದ ಅವರು ಇದು ಬಹು ದಿನಗಳ ಹೋರಾಟ. ನಮ್ಮ ಸರ್ಕಾರ ಒಳ ಮೀಸಲಾತಿ ಘೋಷಣೆ ಮಾಡಿದೆ.ಕೇಂದ್ರಕ್ಕೆ ನಮ್ಮ ಸರ್ಕಾರ ಶಿಫಾರಸ್ಸು ಮಾಡಿತ್ತು.ಈಗ ಸುಪ್ರೀಂ ಕೋರ್ಟ್ ಆದೇಶ ಆಗಿದೆ.ಬೇರೆ ರಾಜ್ಯಗಳಲ್ಲಿ ಒಳ ಮೀಸಲಾತಿ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮಾಡೋಕೆ ಇವರಿಗೆ ಏನು ತೊಂದರೆ ಆಗಿದೆ?.ಬೀದಿ ಬೀದಿಯಲ್ಲಿ ರಂಪಾಟ ಶುರುವಾಗಿದೆ,.ಒಳ ಮೀಸಲಾತಿ ಆಗಲೇಬೇಕು.ಅನ್ಯಾಯ ಆದವರು ಹೋರಾಟ, ಬೇಡಿಕೆ ಇಡುವುದು ಸಹಜ ಎಂದಿದ್ದಾರೆ.
ಡಿಕೆ ಶಿವಕುಮಾರ್ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದು ಜೈನರನ್ನೆಲ್ಲಾ ನೆಪ ಮಾಡಿಕೊಂಡಿದ್ದಾರೆ ಅವರು ಅಷ್ಟೇ. ಆದರೆ ಅವರ ಉದ್ದೇಶ ಕೇವಲ ಮುಸ್ಲಿಮರನ್ನು ಗಮನದಲ್ಲಿಟ್ಟುಕೊಂಡು ಮೀಸಲು ಕೊಡೋದಾಗಿದೆ. ತುಷ್ಟೀಕರಣ ಭಾಗವಾಗಿ ಇದು ನಡೀತಿದೆ.ನಮ್ಮ ಸರ್ಕಾರ ಬಂದಾಗ ಯಾರನ್ನು ಎಲ್ಲಿ ಇಡಬೇಕು ಇಡ್ತೇವೆ ಎಂದ್ರು.ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.4% ಮೀಸಲಾತಿ ವಿಚಾರದ ಬಗ್ಗೆ ಮಾತನಾಡುತ್ತಾ ನಿನ್ನೆ, ಮೊನ್ನೆ ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸ್ತಿದೆ.ನಮಗೆ ಯಾರ ಹಂಗೂ ಬೇಕಿಲ್ಲ.1947ರಲ್ಲಿ ನಮಗೆ ಸ್ವಾತಂತ್ರ್ಯ ಬಂದಿದೆ, ದೇಶ ವಿಭಜನೆ ಮಾಡಲಾಗಿದೆ.ನೂರು ವರ್ಷಗಳ ಸಂಧರ್ಭದಲ್ಲಿ ಮುಸ್ಲಿಂ ರಾಷ್ಟ್ರ ಮಾಡ್ತೀವಿ ಅಂತ ಯಾರು ಹೇಳಿರೋದು.?.ಓಲೈಕೆ ರಾಜಕಾರಣ ಮಾಡಲು ಕಾಂಗ್ರೆಸ್ ಮುಂದಾಗಿದೆ.ಮುಸ್ಲಿಂ ಸಮುದಾಯದಿಂದ ದೇಶಕ್ಕೆ ಗಂಡಾಂತರ ಇಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಇರೋ ಹಿಂದೂಗಳಿಂದ ದೇಶಕ್ಕೆ ಗಂಡಾಂತರವಾಗಿದೆ ಎಂದಿದ್ದಾರೆ.