ಮನೆ Latest News ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ; ಬಿಜೆಪಿ...

ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ; ಬಿಜೆಪಿ ಪರವಾಗಿ ಸುಹಾಸ್ ಕುಟುಂಬಕ್ಕೆ 25 ಲಕ್ಷ ಪರಿಹಾರ

0

ಮಂಗಳೂರು: ಬಜ್ಪೆಯ ಕಿನ್ನಿ ಪದವು ಎಂಬಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಇದೇ ವೇಳೆ  ಬಿಜೆಪಿ ಪರವಾಗಿ ಸುಹಾಸ್ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡೋದಾಗಿ ತಿಳಿಸಿದ್ರು.

ಇಂದು ಬಂಟ್ವಾಳ ತಾಲೂಕಿನ ಪುಳಿಮಜಲಿನಲ್ಲಿರೋ ಸುಹಾಸ್ ಶೆಟ್ಟಿ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಈ ವೇಳೆ ಮಾತನಾಡಿದ ಅವರು ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭವೇ ಕಳಚಿ ಬಿದ್ದಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದ್ರು.

, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ಘಟನೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ರಾಜ್ಯ ಸರಕಾರ ಪರಿಹಾರ ಘೋಷಿಸಬೇಕೆಂದು ಇದೇ ವೇಳೆ ಅವರು ಆಗ್ರಹಿಸಿದ್ರು.  ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ  ತನಿಖೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಸುಹಾಸ್ ಶೆಟ್ಟಿ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ನೀಡಿಲ್ಲ; ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ, ಗೃಹ ಇಲಾಖೆಯ ವೈಫಲ್ಯ ಮತ್ತು ಕಾಂಗ್ರೆಸ್ ಸರಕಾರದ ನೀತಿಯಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.

ರಾಜ್ಯದ ಜನತೆಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರಕಾರದ ಕುರಿತು ವಿಶ್ವಾಸ ಇಲ್ಲದಂತಾಗಿದೆ ಎಂದ ಅವರು, ನಾನು, ವಿಪಕ್ಷ ನಾಯಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದೇವೆ. ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದೇವೆ ಎಂದರು. ಇಂಥ ಘಟನೆಗಳು ನಡೆದಾಗ ರಾಜ್ಯ ಸರಕಾರ ಯಾವತ್ತೂ ಹಿಂದೂ ಕಾರ್ಯಕರ್ತರ ಪರವಾಗಿ ನಿಂತಿಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರಕ್ಕೆ ಮನುಷ್ಯತ್ವ ಇದ್ದರೆ ಆ ಬಡ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ರು.

ಇನ್ನು ಮಂಗಳೂರಿಗೆ ಭೇಟಿ ನೀಡುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ. ವಿಜಯೇಂದ್ರ‌ ಹೇಳಿಕೆ ಇದು ಪೂರ್ವನಿಯೋಜಿತ ಕೃತ್ಯವಾಗಿದೆ. ಕಾಶ್ಮೀರದಲ್ಲಿ ಹಿಂದುಗಳ ಹತ್ಯೆಯಾಗಿತ್ತು. ಇದು‌ ಮಾಸುವ ಮುನ್ನವೇ ಮತ್ತೆ ಮಂಗಳೂರಿನಲ್ಲಿ ಹಿಂದುವಿನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಏನು ಮಾಡಿದರೂ ನಡೆಯುತ್ತದೆ ಎನ್ನುವ ಮನೋಭಾವನೆ ಬಂದಿದೆ. ಅದಕ್ಕೆ ಈ ಘಟನೆ ನಡೆಯುತ್ತಿದೆ. ಗೃಹ ಸಚಿವರು ಬದುಕಿಲ್ಲವೇ?. ಹಿಂದು ಕಾರ್ಯಕರ್ತನ ಜೀವಕ್ಕೆ ಬೆದರಿಕೆ ಇದೆ ಎಂದು ಗೊತ್ತಿತ್ತು. ಆದರೂ ಘಟನೆ ಆಗಿದೆ ಎಂದರು.