ಮನೆ Latest News ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಭೈರವೈಕ್ಯ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಭೈರವೈಕ್ಯ

0

ಬೆಂಗಳೂರು; ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಭೈರವೈಕ್ಯರಾಗಿದ್ದಾರೆ.  ಮಧ್ಯರಾತ್ರಿ 12 ಗಂಟೆಗೆ ಕೆಂಗೇರಿಯಲ್ಲಿರುವ ಮಠದಲ್ಲಿ ಭೈರವೈಕ್ಯರಾಗಿದ್ದಾರೆ. ಇಂದು ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ ಬಳಿಕ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಉತ್ತರಾಧಿಕಾರಿಯಾಗಿರುವ ನಿಶ್ಚಲಾನಂದನಾಥ ಸ್ವಾಮೀಜಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿದರು.

ಇನ್ನು  ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ ಡಿಕೆ ಶಿವಕುಮಾರ್ ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಭೈರವೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಆಧ್ಯಾತ್ಮ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧರ್ಮ ಕೈಂಕರ್ಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು.ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಕ್ತರಿಗೆ ಶ್ರೀ ಕಾಲ ಭೈರವೇಶ್ವರ ದೇವರು  ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಸದಾಶಿವನಗರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ನಮ್ಮ ಸಮಾಜದ ಹಿರಿಯ ಸ್ವಾಮಿಗಳು‌.ತಮ್ಮದೇ ರೀತಿಯಲ್ಲಿ ಸಮಾಜ ಸೇವೆ ‌ಮಾಡಿದ್ದಾರೆ. ಧಾರ್ಮಿಕವಾಗಿ ಕೆಲಸ ಮಾಡ್ತಿದ್ರು. ನಾನು ಗೌರವ ಸಲ್ಲಿಸಲು ಹೋಗ್ತಿದ್ದೇನೆ. ಸ್ವಾಮೀಜಿಗೆ ಬಹಳ ಭಕ್ತಾದಿಗಳು ಇದ್ರು.೨೫ ವರ್ಷ ಆಯ್ತು ಮಠ ಸ್ಥಾಪನೆಯಾಗಿ ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ‌. ಅವರ ಆತ್ಮಕ್ಕೆ ಶಾಂತಿ ಸಿಗಲಿ. ನನಗೆ ಬಹಳ ಸಲ ಆಶೀರ್ವಾದ ಮಾಡಿದ್ದರು. ಸಿಎಂ ಆಗಲಿ ಎಂಬ ಆಶೀರ್ವಾದ ಮಾಡಿದ್ದರು ಎಂದು ಹೇಳಿದ್ದಾರೆ.