ಮನೆ Latest News ಬಿಜೆಪಿ ಸಂಸದ ಡಾ ಕೆ ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಪ್ರಕರಣ: ಬಿಜೆಪಿ ವಿರುದ್ಧ...

ಬಿಜೆಪಿ ಸಂಸದ ಡಾ ಕೆ ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಪ್ರಕರಣ: ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು; ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಡಾ ಕೆ ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿದ  ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಂಸದ ಕೆ.ಸುಧಾಕರ್ ಅಭಿನಂದನಾ ಕಾರ್ಯಕ್ರಮ ಮಾಡಿದ್ದರು.ಪ್ರತಿಪಕ್ಷ ನಾಯಕ ಆರ್.ಅಶೋಕ್ ಭಾಗಿಯಾಗಿದ್ದರು.ವೇದಿಕೆಯಲ್ಲಿ ಬಹಿರಂಗವಾಗಿ ಮದ್ಯ ಸಪ್ಲೈ ಮಾಡಿದ್ದಾರೆ.ಬಿಜೆಪಿಯವರು ದೊಡ್ಡದಾಗಿ ಸಂಸ್ಕೃತಿ, ಸಂಪ್ರದಾಯದ, ಸತ್ಸಂಗ ಬಗ್ಗೆ ಮಾತನಾಡುತ್ತಾರೆ. ಅವರೇ ಹೀಗೆ ಮಾಡಿದ್ದಾರೆ ಎಂದು ಹೇಳಿದೆ.ಈ ಸಂಬಂಧ ಕ್ರಮ ಏನು ತೆಗೆದುಕೊಂಡಿಲ್ಲ ಎಂದಿದ್ದಾರೆ. ಇನ್ನು ಮದುವೆ ಮಾಡಿ ಬೀದಿಯಲ್ಲಿ ಮಾಡು ಎಂದರೆ ಹೇಗೆ?ಸಾರಾಯಿ, ವಿಸ್ಕಿಯಾದರೂ ಕುಡಿಯಲಿ.ಆದರೆ ಎಲ್ಲಿ ಬೇಕಾದರೂ ಕುಡಿಯಕ್ಕಾಗುತ್ತಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಬಿಜೆಪಿ ಸಂಸದ ಡಾ ಕೆ ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಜಿ ಕೆ ಶಿವಕುಮಾರ್ ಅವರು ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವುದು ಸೆಕೆಂಡರಿ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ನೆಲಮಂಗಲ ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಉಚ್ಛಾಟನೆ

ಇನ್ನು ಜುಲೈ 7 ರಂದು ನೆಲಮಂಗಲದಲ್ಲಿ ಬಿಜೆಪಿ ಸಂಸದ ಡಾ ಕೆ ಸುಧಾಕರ್ ಅವರಿಗೆ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಉಚ್ಛಾಟನೆ ಮಾಡಲಾಗಿದೆ.

ನೆಲಮಂಗಲ ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.ಜುಲೈ 7 ರಂದು ನೆಲಮಂಗಲದಲ್ಲಿ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಹಿನ್ನೆಲೆಯಲ್ಲಿ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ನೆಲಮಂಗಲ ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜಗದೀಶ್ ಚೌಧರಿ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಮಾಡಿ ಪಕ್ಷಕ್ಕೆ ಮುಜುಗರ ತಂದ ಆರೋಪದ ಹಿನ್ನೆಲೆಯಲ್ಲಿ ಅವರನ್ನು6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ.

ಜುಲೈ 7 ರಂದು ನೆಲಮಂಗಲ  ತಾಲೂಕಿನ ಬಾವಿಕೆರೆ ಗ್ರಾಮದ ಜಮೀನೊಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನೂತನ ಸಂಸದ ಡಾ.ಕೆ. ಸುಧಾಕರ್‌ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಅದರಲ್ಲಿ ಭರ್ಜರಿ ಬಾಡೂಟದ ಜತೆ ಮದ್ಯ ವಿತರಣೆ ಮಾಡಲಾಗಿತ್ತು. ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಚಿತ ಎಣ್ಣೆ ಬಾಟಲಿಗಳಿಗಾಗಿ ಮುಗಿಬಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಹಿನ್ನೆಲೆ  ಮೈತ್ರಿ ನಾಯಕರು, ಅಂದಾಜು 650 ಕೇಸ್‌ ಬಿಯರ್‌ ಹಾಗೂ 450 ಕೇಸ್‌ ನಾನಾ ಬಗೆಯ ಮದ್ಯದ ಬಾಟಲಿಗಳೊಂದಿಗೆ ನೀರಿನ ವ್ಯವಸ್ಥೆಯೂ ಮಾಡಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.