ಮನೆ Latest News ಮೈಸೂರು ಜಿಲ್ಲಾ ಅಭಿವೃದ್ಧಿ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಮೈಸೂರು ಜಿಲ್ಲಾ ಅಭಿವೃದ್ಧಿ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

0

ಬೆಂಗಳೂರು: ಮೈಸೂರು ಜಿಲ್ಲಾ ಅಭಿವೃದ್ಧಿ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಭಾಗದ ನಾಯಕರು  ಭಾಗಿಯಾಗಿದ್ದರು.  ಮೈಸೂರು ಸಂಸದ ಯಧುವೀರ್, ಶಾಸಕ ಜಿ ಟಿ ದೇವೇಗೌಡ, ಬಿಜೆಪಿ ಶಾಸಕ ಶ್ರೀವತ್ಸಾ ಸೇರಿದಂತೆ ಮೈಸೂರು ಜಿಲ್ಲಾ ಭಾಗ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹಾದೇವಪ್ಪ, ಸಚಿವ ಭೈರತಿ ಸುರೇಶ್ , ಪಾಲಿಕೆ ಅಧಿಕಾರಿಗಳು ಭಾಗಿಯಾಗಿದ್ದರು

ಸಭೆಯಲ್ಲಿ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ.. ಆದ್ರೂ ಯಾಕಿಂಗಾಯ್ತು ಎಂದು  ಮೈಸೂರು ಜಿಲ್ಲಾ ಅಭಿವೃದ್ಧಿ ಸಭೆಯಲ್ಲಿ ಎಲ್ಲಾ ಪಕ್ಷದ ಶಾಸಕರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರು ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ  ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ವೇಳೆ ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು  ಸಿಎಂ ಗಮನಕ್ಕೆ ತಂದಿದ್ದಾರೆ.

ಶಾಸಕರು ಹೀಗೆ ಹೇಳುತ್ತಿದ್ದಂತೆ ಪ್ರಶ್ನಿಸಿದ ಸಿದ್ದರಾಮಯ್ಯ, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ.  ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು?  ಯಾಕೆ? ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ?. ಹೊಸ ಬಡಾವಣೆ ಮಾಡುವಾಗ ವಿದ್ಯುತ್‌  ಸಂಪರ್ಕ, ರಸ್ತೆ, ಒಳಚರಂಡಿ  ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ  ಅಭಿವೃದ್ಧಿ ಮಾಡುವವರ ಜವಾಬ್ದಾರಿ.  ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು ಎಂದರು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇನ್ನು ಇದೇ  ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಸಿಎಂ ಸೂಚನೆ ನೀಡಿದರು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ. ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು  ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ 15 ರಂದು ಭೇಟಿಯಾಗಿ ಚರ್ಚಿಸಲು ಸಿಎಂ ತೀರ್ಮಾನ ಮಾಡಿದ್ದಾರೆ.

 

ಮೈಸೂರು ಜಿಲ್ಲಾಭಿವೃದ್ಧಿ ಕುರಿತಾದ ಸಭೆಯಯಲ್ಲಿ ಚರ್ಚೆಯಾಗ ಅಂಶಗಳು ಹೀಗಿವೆ..

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.

ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ.

ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ.

ಇನ್ನೂ 95  ಎಕ್ರೆ ಪಾವತಿ ಆಗಬೇಕಿದೆ ಎಂದು ಮಾಹಿತಿ ನೀಡಿದ ಸಿಎಂ

ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ

ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು.

ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.

ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು

ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ.

ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ.

ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು,

ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ.

ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ

ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ.

ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ.

ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ.

ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ.

ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ.

ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404  ಎಕ್ರೆ ಜಮೀನು ಸ್ವಾಧೀನ

ಕುರಿತಾಗಿ ಈಗಗಾಗಲೇ  ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.

ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ.