ಮನೆ Latest News ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ; ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕ...

ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ; ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್

0

 

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ನಿನ್ನೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದು ಎಲ್ಲಾ 14 ಸೈಟುಗಳನ್ನು ವಾಪಾಸ್ ನೀಡೋದಾಗಿದ ಹೇಳಿದ್ದರು. ಅಲ್ಲದೇ ಈ ಪ್ರಕರಣದಿಂದಾದ ತಮಗಾದ ನೋವಿನ ಬಗ್ಗೆ ಸುಧೀರ್ಘ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಮುಡಾ ನೀಡಿರುವ 14 ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಎಲ್ಲಾ 14 ಸೈಟುಗಳನ್ನು ವಾಪಾಸ್ ಕೊಡೋದಾಗಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಮುಡಾ ಹಗರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ದಯವಿಟ್ಟು ನಿಮ್ಮ ರಾಜಕೀಯ ದ್ವೇಷಕ್ಕೆ ರಾಜಕೀಯದಿಂದ ದೂರವಿರುವಂತ ಕುಟುಂಬದ ಹೆಣ್ಣುಮಕ್ಕಳನ್ನು ವಿವಾದದ ಕಣಕ್ಕೆ ತಂದು ಗೌರವ, ಘನತೆ ಹಾಳು ಮಾಡಬೇಡಿ. ನಾನು ಪಡೆದಿರುವಂತ ಮುಡಾದ 14 ಸೈಟುಗಳನ್ನು ವಾಪಾಸ್ ಕೊಡಲು ನಿರ್ಧರಿಸಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಘೋಷಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದಾರೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ನಾನು ಯಾವತ್ತೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿಲ್ಲ. ಯಾವುದೇ ಕಾರಣಕ್ಕೂ ನನ್ನಿಂದಾಗಿ ತನ್ನ ಪತಿಯ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ಬರಬಾರದು ಎಂದು ಬಹಳ ಎಚ್ಚರಿಕೆಯಿಂದ ನಡೆದುಕೊಂಡಿದ್ದೇನೆ. ನನ್ನ ಪತಿಗೆ ರಾಜ್ಯದ ಜನತೆ ತೋರಿಸುವ ಪ್ರೀತಿ, ಅಭಿಮಾನವನ್ನು ದೂರದಿಂದಲೇ ನೋಡಿ ನಾನು ಸಂತೋಷ ಹಾಗೂ ಹೆಮ್ಮೆಪಟ್ಟವಳು. ಹೀಗಿರುವಾಗ

ಮುಡಾ ನಿವೇಶನಕ್ಕೆ ಸಂಬಂಧಪಟ್ಟಂತೆ ಕೇಳಿ ಬರುತ್ತಿರುವ ಆರೋಪಗಳು ನನಗೆ ತುಂಬಾ ನೋವು ಉಂಟು ಮಾಡಿದೆ. ನನ್ನ ಸ್ವಂತ ಸಹೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನು ಇಷ್ಟೆಲ್ಲಾ  ರಾದ್ದಾಂತಕ್ಕೆ ಕಾರಣವಾಗಿದೆ. ಇದರಿಂದ ನನ್ನ ಪತಿ ಸುಖಾಸುಮ್ಮನೆ ಆರೋಪಗಳನ್ನು ಎದುರಿಸುವಂತಾಗುತ್ತೆ ಅಂತಾ ನಾನು ಊಹೆ ಕೂಡ ಮಾಡಿರಲಿಲ್ಲ.

ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅವರು ಅಧಿಕಾರದಲ್ಲಿದ್ದ ಅವರಿಂದ ನಾನು ಏನನ್ನೂ ನನಗಾಗಲೀ ಹಾಗೂ ನನ್ನ ಕುಟುಂಬಕ್ಕಾಗಲೀ ಬಯಸಿಲ್ಲ. ಹಾಗಾಗಿ ಈ ನಿವೇಶನಗಳು ತೃಣಕ್ಕೆ ಸಮ. ಹಾಗಾಗಿ ಇಷ್ಟೆಲ್ಲಾ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ ಎಂಬುದಾಗಿ ಪಾರ್ವತಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಇನ್ನು ನಾನು ಈ ವಿಚಾರದಲ್ಲಿ ಪತಿಯವರ ಅಭಿಪ್ರಾಯ ಏನಿದೆ ಅನ್ನೋದು ನನಗೆ ಗೊತ್ತಿಲ್ಲ. ಈ ಬಗ್ಗೆ ನನ್ನ ಮಗ ಹಾಗೂ ನನ್ನ ಕುಟುಂಬದ ಇತರ ಸದಸ್ಯರ ಬಳಿ ಯಾವುದೇ ಚರ್ಚೆ ನಡೆಸಿಲ್ಲ. ಇದು ನಾನು ಮನಸಾಕ್ಷಿಗೆ ಅನುಗುಣವಾಗಿ ತೆಗೆದುಕೊಂಡಿರುವ ನಿರ್ಧಾರ ಎಂದಿದ್ದಾರೆ. ಇನ್ನು ಈಗ ಯಾಕೆ ನೀವು ಈ ನಿರ್ಧಾರಕ್ಕೆ ಬಂದಿದ್ದೀರಿ? ಅಂತಾ ಯಾರದಾರೂ ಪ್ರಶ್ನಿಸಬಹುದು. ಆದರೆ ನಾನು ಈ ಆರೋಪ ಕೇಳಿ ಬಂದ ದಿನವೇ ಸೈಟುಗಳನ್ನು ವಾಪಾಸ್ ಕೊಡುವ ನಿರ್ಧಾರ ಮಾಡಿದ್ದೆ. ಈ ನಿವೇಶನ ಹಂಚಿಕೆ ವಿಚಾರವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಪಶುವಾಗಬಾರದು  ಎಂದು ಕೆಲವು ಹಿತೈಷಿಗಳು ನನಗೆ ಹೇಳಿದಕ್ಕೆ  ನಾನು ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ ಅವರು ಹೇಳಿದ್ದಾರೆ.

ಅಂದ್ಹಾಗೆ ನನ್ನ ಈ ನಿರ್ಧಾರ ಅಚಲವಾಗೆದೆ. ಈ ನಿವೇಶನಗಳನ್ನು ವಾಪಸು ಕೊಡೋದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನವಿನಂತಿ ಎಂದರೆ ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಭಾವನಾತ್ಮಕ ಪತ್ರದ ಮೂಲಕ ಮನವಿ ಮಾಡಿದ್ದಾರೆ.