ಮನೆ Latest News ಕೆಪಿಎಸ್ಇಯ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಯಡವಟ್ಟು; ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಕೆಪಿಎಸ್ಇಯ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಯಡವಟ್ಟು; ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

0

ಬೆಂಗಳೂರು: ಕೆಪಿಎಸ್ಇಯ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು ಹಿನ್ನೆಲೆ ಮರು ಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.ಎರಡು ತಿಂಗಳೊಳಗೆ ಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಸಿಎಂ ಸಿದ್ದರಾಮಯ್ಯ ಅವರು  ನಿರ್ದೇಶನ ನೀಡಿದ್ದಾರೆ.

ಕೆಎಎಸ್ ನ ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆಯಲ್ಲಾಗಿದ್ದ ಯಡವಟ್ಟುನಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಂಗಾಲಾಗಿದ್ದರು. ತಪ್ಪು ಮಾಡಿದವರ ಮೇಲೆ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಮುಂದಿನ ಮರುಪರೀಕ್ಷೆಯನ್ನ ಜವಾಬ್ದಾರಿಯುತವಾಗಿ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪರೀಕ್ಷಾರ್ಥಿಗಳಿಗೆ ಆಶ್ವಾಸನೆಯನ್ನು ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೆ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಾವು ನೇಮಕಾತಿ ಪ್ರಕ್ರಿಯೆಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದಿದ್ದಾರೆ.

ಕೆಪಿಎಸ್ಇಯ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆಯ ಕನ್ನಡ ಟ್ರಾನ್ಸಲೆಟ್ ಮಾಡುವಾಗ ಯಡವಟ್ಟು ಆಗಿತ್ತು. ಪ್ರಶ್ನೆಗಳು ತಪ್ಪು ತಪ್ಪಾಗಿ ಕನ್ನಡ ಟ್ರಾನ್ಸಲೆಟ್ ಆಗಿದ್ದವು. ಇದರಿಂದಾಗಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಸಮಸ್ಯೆಯನ್ನು ಎದುರಿಸಿದ್ದರು. ಕೆಲವು ಪ್ರಶ್ನೆಗಳು ಅರ್ಥವಾಗದೇ ವಿದ್ಯಾರ್ಥಿಗಳಿಗೆ ಭಾರೀ  ಸಮಸ್ಯೆಯಾಗಿತ್ತು.೩೮೪ ಹುದ್ದೆಗಳಿಗೆ ಕೆಎಎಸ್ನ ಪ್ರಿಲಿಮ್ಸ್ ಪರೀಕ್ಷೆ ನಡೆದಿತ್ತು.೧,೩೧,೮೮೫ ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಇನ್ನು  ಕೆಪಿಎಸ್ಇಯ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಪ್ರಶ್ನೆಯ ಕನ್ನಡ ಟ್ರಾನ್ಸಲೆಟ್ ಮಾಡುವಾಗ ಆದ ಯಡವಟ್ಟಿನ ಬಗ್ಗೆ ಪರೀಕ್ಷಾರ್ಥಿಗಳು ಆಕ್ರೋಶವನ್ನು ಹೊರ ಹಾಕಿದ್ದರು. ಪರೀಕ್ಷೆಯ ಯಡವಟ್ಟಿನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಭಿಯಾನ ಕೂಡ ನಡೆದಿತ್ತು. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದಕ್ಕೆ ಕನ್ನಡ ಪರ ಸಂಘಟನೆಗಳು ಆಕ್ರೋಶಗೊಂಡಿದ್ದವು.ಎಬಿವಿಪಿ, ಕರವೇ ಸಂಘಟನೆಗಳು ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳ ಬೆಂಬಲಕ್ಕೆ ನಿಂತಿದ್ದವು. ಇನ್ನು ಇಂದು ಫ್ರೀಡಂಪಾರ್ಕ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ವಿದ್ಯಾರ್ಥಿಗಳು ಸತತ ಅಭಿಯಾನಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮರುಪರೀಕ್ಷೆಗೆ ಆದೇಶ ನೀಡಿದ್ದು ಪರೀಕ್ಷಾರ್ಥಿಗಳು ಖುಷಿಯಾಗಿದ್ದಾರೆ.