ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅಧಿಕಾರ ಮುಂದುವರಿಕೆಗೂ ಸಿದ್ದರಾಗಿದ್ದಾರೆ ಪದತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂದು ಶಾಸಕ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಗೊಂದಲ ಬಗೆಹರಿಸಬೇಕು. ಗೊಂದಲ ಬಗೆಹರಿಸಿದಷ್ಟು ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರ ಮುಂದುವರಿಕೆಗೂ ಸಿದ್ದರಾಗಿದ್ದಾರೆ ಪದತ್ಯಾಗಕ್ಕೂ ಸಿದ್ದರಾಗಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ. ಪಕ್ಷದ ಭವಿಷ್ಯ ಇದರಲ್ಲಿ ಅಡಗಿರುತ್ತದೆ. ಹೀಗಾಗಿ ಸೂಕ್ತವಾದ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುವ ವಿಶ್ವಾಸವಿದೆ. ಸಿಎಂ ಜೊತೆಗೆ ಸಭೆ ಮಾಡಿದಾಗಲೂ ಒಪನ್ ಮೈಂಡ್ ನಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಸೂಚನೆ ಪಾಲನೆ ಮಾಡುತ್ತೇನೆ, ಆಗ ನಿಮ್ಮೆಲ್ಲರ ಸಹಕಾರ ಇರಬೇಕು ಎಂಬುದು ಸಿಎಂ ಅಭಿಮತ. ಏನು ತೀರ್ಮಾನ ರಾಹುಲ್ ಗಾಂಧಿ ಕೊಡ್ತಾರೆ ಅದರಂತೆ ನಡೆಯೋಣ ಎಂದಿದ್ದಾರೆ. ಅಧಿಕಾರ ಶಾಶ್ವತವಲ್ಲ, ಅಧಿಕಾರ ಕಳೆದುಕೊಂಡವರು ಗಳಿಸ್ತಾರೆ. ಸಿಎಂ ಮನಸ್ಥಿತಿ ರಾಹುಲ್ ನಿರ್ದೇಶನದಂತೆ ಹೋಗಬೇಕು ಎಂಬುದು. ಸಿದ್ದರಾಮಯ್ಯ ಮುಂದುವರಿಬೇಕು ಎಂಬ ಬಗ್ಗೆ ನಮ್ಮ ನಮ್ಮ ಅಭಿಪ್ರಾಯ ನಾವೆಲ್ಲ ಹೈಕಮಾಂಡ್ ಗೆ ಹೇಳಿದ್ದೇವೆ. ದಲಿತ ಸಿಎಂ ಆಗಬೇಕು ಎಂಬುದಕ್ಕೆ ನಾನು ಈಗಲೂ ಬದ್ಧ. ಅಹಿಂದ ವರ್ಗ ನಿಜವಾಗಿ ಸಮಾಧಾನವಾಗಿಲ್ಲ 2013 ರಿಂದ 2018 ರವರೆಗಿನ ಸಿದ್ದರಾಮಯ್ಯಗೂ ಈಗಿನ 2023 ರಿಂದ 2028 ರವರೆಗಿನ ಸಿದ್ದರಾಮಯ್ಯ ಗೂ ಬಹಳ ವ್ಯತ್ಯಾಸ ಇದೆ. ಮುಂದಿನ ಚುನಾವಣೆ ಎರಡು ವರ್ಷ ಇದೆ. ಮುಂದಿನ ರಾಜಕೀಯ ಹೀಗೇ ಆಗಬಹುದು ಎಂಬುದಕ್ಕೆ ಈಗಲೇ ಸಾಧ್ಯವಿಲ್ಲ. ರಾಜಕಾರಣದಲ್ಲಿ ಬಹಳಷ್ಟು ನೀರು ಹರಿಬೇಕಾದ ಸಮಯವೂ ಇದೆ. ರಾಹುಲ್ ಗಾಂಧಿ ಹೇಳಿದ್ದನ್ನು ಸಿದ್ದರಾಮಯ್ಯ ಪಾಲನೆ ಮಾಡುವ ಮನಸ್ಥಿತಿಯಲ್ಲಿ ಇದ್ದಾರೆ. ನಮ್ಮೆಲ್ಲರ ಒತ್ತಾಯ ನಾವು ಏನೇನು ಹೇಳಬೇಕು ಹೇಳಿದ್ದೇವೆ ಎಂದಿದ್ದಾರೆ.











