ಮನೆ Latest News ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿ ಪ್ರಕರಣ: ವಿಧಾನಸೌಧದಲ್ಲಿ ಸಿಎಂ...

ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿ ಪ್ರಕರಣ: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ

0

ಬೆಂಗಳೂರು; ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ    ಆರ್ ಸಿ  ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾದದ್ದು ಎಂದು  ಮೃತಪಟ್ಟವರಿಗೆ ಸಂತಾಪ  ಸೂಚಿಸಿದರು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದರು.

ಇನ್ನು ಘಟನೆಗೆ ಸಂಬಂಧಪಟ್ಟಂತೆ  ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ  ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.  ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ  ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿಸಿದ್ರು.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ  ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ  ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದರು.ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ರು.

ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ರು.