ಮನೆ Latest News ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು; ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇರಳದಲ್ಲಿ 1೦೦ ಮನೆ ಕಟ್ಟಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯ್ ವಿಜಯನ್ ಗೆ ಪತ್ರ ಬರೆದಿದ್ದಾರೆ.

ಕೇರಳದ ವಯನಾಡಿನಲ್ಲಿ ಉಂಟಾದ ಭೀಕರ ಪ್ರವಾಹ ಸಂದರ್ಭದಲ್ಲಿ ಮನೆ ಕಟ್ಟಿಕೊಡುವ ಸಿಎಂ  ಸಿದ್ದರಾಮಯ್ಯ ಭರವಸೆ ನೀಡಿದ್ದರು. ಕರ್ನಾಟಕ ಸರ್ಕಾರದಿಂದ ಸುಮಾರು 100 ಮನೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಸಂಬಂಧ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಆದ್ರೆ ಇದುವರೆಗೂ ಕೇರಳ ಸಿಎಸ್ ರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆ, ಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನಮ್ಮ ಸರ್ಕಾರ ಮನೆ ನಿರ್ಮಾಣ ಮಾಡಲು ಸಕಲ ಕ್ರಮ ಕೈಗೊಂಡಿದೆ.  ಅದಕ್ಕಾಗಿ ಅಲ್ಲಿ ಭೂಮಿ ಖರೀದಿಗೂ ಸರ್ಕಾರ ಸಿದ್ದವಾಗಿದೆ. ಆದ್ರೆ ಇದಕ್ಕೆ ಸಂಬಂಧಿಸಿದಂತೆ ಕೇರಳ ಸಿಎಸ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.