ಮನೆ Latest News ಬೆಂಗಳೂರಿನಲ್ಲಿ ಕಮರ್ಷಿಯಲ್ ಎಲ್ ಪಿಜಿ ಕೊರತೆ ಹಿನ್ನೆಲೆ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರಿನಲ್ಲಿ ಕಮರ್ಷಿಯಲ್ ಎಲ್ ಪಿಜಿ ಕೊರತೆ ಹಿನ್ನೆಲೆ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

0
ಬೆಂಗಳೂರು: ಬೆಂಗಳೂರಿನಲ್ಲಿ‌ ವಾಣಿಜ್ಯ ಬಳಕೆಯ ಎಲ್ ಪಿಜಿ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಇಲಾಖೆ ಸಚಿವ ಹರದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಸಾಕಷ್ಟು ಹೋಟೆಲ್‌,  ರೆಸ್ಟೋರೆಂಟ್ ಗಳಿದ್ದು, ಕಮರ್ಷಿಯಲ್ ಗ್ಯಾಸ್ ಕೊರತೆ ಉಂಟಾಗಿರುವ ಕಾರಣ ಸಾಕಷ್ಟು ಹೋಟೆಲ್‌ ಗಳಿಗೆ ಬೀಗ ಬಿದ್ದು ತೊಂದರೆ ಉಂಟಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಕೊರತೆಯಿಂದಾಗಿ ವ್ಯವಹಾರಗಳು ಸ್ಥಗಿತಗೊಳ್ಳುವ ಆತಂಕ ಇದ್ದು
ಸಾಮಾನ್ಯ ಜನರಿಗೆ ತೊಂದರೆಯಾಗುವ ಕಾರಣ  ತೈಲ ಮಾರುಕಟ್ಟೆ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಇದೇ ವಿಚಾರವಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೂಡಾ ನಿನ್ನೆ ಹರದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದರು.