ಮಂಡ್ಯ : ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೆ ಒಳಗಾಗಿದ್ದ 55 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎಲ್ಲಾ 55 ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೇಲ್ ನೀಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡೂ ಕೋಮಿನ 55 ಆರೋಪಿಗಳು ಅರೆಸ್ಟ್ ಆಗಿದ್ದರು.ಅವರೆಲ್ಲರಿಗೂ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಇನ್ನು ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಧಪಟ್ಟಂತೆ ಸೆಪ್ಟಂಬರ್ 11 ರಂದು ಎರಡೂ ಕೋಮಿನ 55 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಅದರಂತೆ ಸೆಪ್ಟಂಬರ್ 12 ರಿಂದ ಎಲ್ಲಾ 55 ಆರೋಪಿಗಳು ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದರು. ಅವರೆಲ್ಲರಿಗೂ ಇದೀಗ ಜಾಮೀನು ಮಂಜೂರಾಗಿದೆ.
ಆರೋಪಿಗಳಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ್ದು ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಮಾಡಬೇಕು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಜೊತೆಗೆ ಅಪರಾಧಿ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತು ವಿಧಿಸಿದೆ. ನಾಳೆ ಭಾನುವಾರ ರಜೆ ಹಿನ್ನೆಲೆ ಸೋಮವಾರ ಜೈಲಿನಿಂದ ಎಲ್ಲಾ 55 ಆರೋಪಿಗಳು ಬಿಡುಗಡೆ ಆಗುವ ಸಾಧ್ಯತೆ ಇದೆ.
ನಾಗಮಂಗಲ ಗಲಭೆಯಲ್ಲಿ ನಷ್ಟಕ್ಕೊಳಗಾದ ವ್ಯಾಪಾರಿಗಳಿಗೆ ವೈಯಕ್ತಿಕ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ನಾಗಮಂಗಲ ಗಲಭೆಯಲ್ಲಿ ನಷ್ಟಕ್ಕೊಳಗಾದ ವ್ಯಾಪಾರಿಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವೈಯಕ್ತಿಕ ಪರಿಹಾರ ಘೋಷಿಸಿದ್ದಾರೆ. ಇಂದು ಗಲಭೆಯಲ್ಲಿ ಬಂಧನಕೊಳಗಾದವರ ಕುಟುಂಬಸ್ಥರನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದರು. ಈ ವೇಳೆ ಬಂಧನಕ್ಕೆ ಒಳಗಾದವರ ಕುಟುಂಬಸ್ಥರು ಹೆಚ್ ಡಿ ಕುಮಾರಸ್ವಾಮಿ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು.
ಅಮಾಯಕರನ್ನ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.ವಿಡಿಯೋದಲ್ಲಿ ಇಲ್ಲ ಅಂದ್ರೆ ವಾಪಸ್ ಕಳುಹುಸುತ್ತೇನೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ದೌರ್ಬಲ್ಯ ಮಾಡಿದ್ದಾರೆಂದು ಅಳಲು ತೋಡಿಕೊಂಡಿದ್ದಾರೆ. ಮಹಿಳೆಯರ ಅಹವಾಲು ಆಲಿಸಿದ ಕುಮಾರಸ್ವಾಮಿ ಅವರು ಅವರಿಗೆ ಧೈರ್ಯ ತುಂಬಿದ್ದಾರೆ.
ಇನ್ನು ನಾಗಮಂಗಲ ಗಲಭೆ ಪ್ರಕರಣದಲ್ಲಿ ನಷ್ಟಕ್ಕೆ ಒಳಗಾದ ವ್ಯಾಪಾರಿಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪರಿಹಾರ ಘೋಷಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ವೈಯಕ್ತಿಕ ಆರ್ಥಿಕ ಪರಿಹಾರ ಘೋಷಣೆ ಮಾಡಿದ್ದಾರೆ. ನಷ್ಟವಾದ ವ್ಯಾಪಾರಿಗಳಿಗೆ ಸಹಾಯ ಮಾಡುತ್ತೇನೆ.ವೈಯಕ್ತಿಕವಾಗಿ ನಾನು ಪರಿಹಾರ ನೀಡುತ್ತೇನೆ. ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡ್ತೀನಿ.ಎಲ್ಲರಿಗೂ ಸಮಾನವಾಗಿ ಪರಿಹಾರ ನೀಡ್ತೀನಿ.ನಾನು ಎರಡು ಧರ್ಮದವರಿಗೂ ಸಹಾಯ ಮಾಡ್ತೀನಿ ಎಂದು ನಾಗಮಂಗಲದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.