ಮನೆ Latest News ಇಂದು ಹೈಕೋರ್ಟ್ ನಲ್ಲಿ ದರ್ಶನ್ ರಿಟ್ ಅರ್ಜಿಯ ವಿಚಾರಣೆ

ಇಂದು ಹೈಕೋರ್ಟ್ ನಲ್ಲಿ ದರ್ಶನ್ ರಿಟ್ ಅರ್ಜಿಯ ವಿಚಾರಣೆ

0

ಬೆಂಗಳೂರು; ಮನೆಯೂಟ ನೀಡಲು ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ಅದರಂತೆ ದರ್ಶನ್ ಪರ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜುಲೈ 25 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹಾಗಾಗಿ ಮತ್ತೆ ಹೈಕೋರ್ಟ್ ಗೆ ದರ್ಶನ್ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ದರ್ಶನ್ ರಿಟ್ ಅರ್ಜಿಯ ವಿಚಾರಣೆ ನಡೆಯಲಿದೆ.

ಮನೆಯೂಟಕ್ಕಾಗಿ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ಜೈಲಿನ ವಿಐಪಿ ಸೆಲ್ ನಲ್ಲಿ ಒಬ್ಬಂಟಿಯಾಗಿರುವ ದರ್ಶನ್ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ದಿನೇ ದಿನೇ ಸೊರಗುತ್ತಿದ್ದಾರೆ ಎನ್ನಲಾಗಿದೆ. ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗಿದ್ದಾರೆ. ತನ್ನನ್ನು ಭೇಟಿಯಾಗಲು ಬಂದವರ ಮುಂದೆ ದರ್ಶನ್ ಕಣ್ಣೀರು ಹಾಕ್ತಿದ್ದಾರೆ.  ಐಷಾರಾಮಿ ಜೀವನ ಮಾಡುತ್ತಿದ್ದ ನಟ ದರ್ಶನ್ ಇದೀಗ ದಿನಗಳನ್ನು ಕಳೆಯೋದಕ್ಕೆ ಪೇಚಾಡುತ್ತಿದ್ದಾರೆ. ಜೈಲಿನ ಉಪ್ಪು, ಹುಳಿ, ಖಾರವಿಲ್ಲದ ಊಟ ದರ್ಶನ್ ಅವರಿಗೆ ಸೇರುತ್ತಿಲ್ಲ. ಅದರಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಹಾಗಾಗಿ ದರ್ಶನ್ ಅವರ ಪರವಾಗಿ ಅವರ ವಕೀಲರು ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ಜೈಲೂಟ ಸೇವಿಸಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸರಿಯಾಗಿ ಊಟ, ನಿದ್ದೆ ಏನೂ ಮಾಡೋದಕ್ಕೂ ಆಗುತ್ತಿಲ್ಲ. ಹಾಗಾಗಿ ಅವರಿಗೆ ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡುವಂತೆ ದರ್ಶನ್‌ ವಕೀಲರು  ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.ಇನ್ನು ಜೈಲಿನಲ್ಲಿ ನೀಡುತ್ತಿರುವ ಊಟ ದರ್ಶನ್ ಅವರಿಗೆ ಸರಿಯಾಗಿ ಜೀರ್ಣವಾಗುತ್ತಿಲ್ಲ. ಇದರಿಂದ ಭೇದಿ ಉಂಟಾಗುತ್ತಿದೆ. ಅಲ್ಲದೇ ಫುಡ್‌ ಪಾಯ್ಸನ್‌ ಕೂಡ ಆಗುತ್ತಿದೆ ಎಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆಂದು, ಹೈಕೋರ್ಟ್ ಗೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ದರ್ಶನ್‌ ಪರವಾದ ವಕೀಲರು ಉಲ್ಲೇಖ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ಅದರಂತೆ ದರ್ಶನ್ ಪರ ವಕೀಲರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಆ ಅರ್ಜಿಯ ವಿಚಾರಣೆ ಕೋರ್ಟ್ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಇದೀಗ ದರ್ಶನ್ ಅವರಿಗೆ ಜೈಲೂಟವೇ ಫಿಕ್ಸ್ ಎಂಬಂತಾಗಿದೆ.