ಮನೆ Latest News ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ; ನಾಳೆ ಮೈಸೂರಿಗೆ ಆಗಮಿಸಲಿರುವ ಗಜಪಡೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ; ನಾಳೆ ಮೈಸೂರಿಗೆ ಆಗಮಿಸಲಿರುವ ಗಜಪಡೆ

0

ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರಾವಾಗಿದೆ.ನಾಳೆ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ಕಾಲದ ವೈಭವ ಕಳೆಗಟ್ಟಲಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ನಾಳೆ ಗಜಪಯಣ ಸಮಾರಂಭ ನಡೆಯಲಿದೆ.ಗಜಪಯಣ ಕಾರ್ಯಕ್ರಮದ ಮೂಲಕ ಕಾಡಿನಿಂಡ ನಾಡಿಗೆ ಗಜಪಡೆ ಎಂಟ್ರಿ ಕೊಡಲಿದೆ. ಅಲ್ಲಿಂದ ನೇರವಾಗಿ  ಮೈಸೂರಿನ ಅರಣ್ಯ ಭವನದ ಆವರಣಕ್ಕೆ ದಸರಾ ಆನೆಗಳು ಬರಲಿವೆ.ವೀರನಹೊಸಹಳಗಳ್ಳಿಯಿಂದ ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಆಗಮಿಸಲಿದೆ.

ನಾಳೆ ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ದಸರಾ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ.ಆರತಿ ಬೆಳಗಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ.ಗಜ ಪಯಣದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ  ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ,ಮೈಸೂರಿನ ಶಾಸಕರು,  ಜನಪ್ರತಿನಿಧಿಗಳು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಬೆಳಿಗ್ಗೆ 10:45ರಿಂದ 11:20ರೊಳಗೆ ಪೂಜಾ ಸ್ಥಳದಿಂದ ತೆರಳಿ ವೇದಿಕೆಗೆ ಕಾರ್ಯಕ್ರಮ ನಡೆಯಲಿದೆ.ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರು ಭಾಷಣ ಮಾಡಲಿದ್ದಾರೆ.  ಬಳಿಕ ಆನೆಗಳ ಮಾವುತರು ಕಾವಾಡಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ನಂತರ ಸ್ಥಳೀಯ ಕಲಾವಿದರು, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ.ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸಲಿವೆ.ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ.ಹೆಚ್ಚುವರಿಯಾಗಿ 4 ಮೀಸಲು ಆನೆಗಳು ಆಗಮಿಸಲಿವೆ. ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಬರಲಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಅಲ್ಲದೇ ಆನೆಗಳು, ಮಾವುತರು ಹಾಗೂ ಕಾವಾಡಿಗಳ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇನ್ನು ಈ ಬಾರಿಯ ದಸರಾದಲ್ಲಿ ಅರ್ಜುನ ಇಲ್ಲ ಅನ್ನೋದು ಅತ್ಯಂತ ನೋವಿನ ವಿಚಾರ. ಆತನ ಅನುಪಸ್ಥಿತಿಯನ್ನು ತುಂಬಲು ಏಕಲವ್ಯ ಆಗಮಿಸುತ್ತಿದ್ದಾನೆ. ಇದು ಅರ್ಜುನನಿಲ್ಲದ ಮೊದಲ ದಸರಾವಾಗಿದೆ.ಇದೇ ಮೊದಲ ಬಾರಿಗೆ ದಸರೆಯಲ್ಲಿ ಏಕಲವ್ಯ ಆನೆ ಭಾಗಿಯಾಗುತ್ತಿದೆ. 39 ವರ್ಷ ಏಕಲವ್ಯ ಆನೆ ಅರ್ಜುನನ ಸ್ಥಾನ ತುಂಬ ಬಲ್ಲ ಎಂಬ ನಂಬಿಕೆಯಿಂದ ಆತನನ್ನು ಕರೆ ತರಲಾಗುತ್ತಿದೆ. ನಾಳೆ ಮೈಸೂರಿನಲ್ಲಿ ಹಬ್ಬದ ಸಂಭ್ರಮವನ್ನು ಇರಲಿದೆ.

ಈ ಬಾರಿ ಅತ್ಯಂತ ಸಡಗರವಾಗಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಮೈಸೂರು; ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಕಳೆದ ವರ್ಷ ಬರದ ಹಿನ್ನೆಲೆ ಅತ್ಯಂತ ಸರಳವಾಗಿ ಮೈಸೂರು ದಸರಾವನ್ನು ಆಯೋಜನೆ ಮಾಡಲಾಗಿತ್ತು. ಆದರೆ ಈ ಬಾರಿ ಅತ್ಯಂತ ಸಡಗರವಾಗಿ ಮೈಸೂರು ದಸರಾವನ್ನು ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಂತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಿತು. ಈ ವೇಳೆ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ದಸರಾ ಉತ್ಸವ ಜನರ ಉತ್ಸವ ಆಗಬೇಕು. ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿಯ ದಸರಾ ಅದ್ಧೂರಿಯಾಗಿ ನಡೆಸೋಣ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಎಂದರು. ಅಲ್ಲದೇ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳುವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರ ಈ ಬಾರಿ 21 ದಿನ ಇರಲಿ ಎಂದು ತಿಳಿಸಿದ್ದಾರೆ. ಹಾಗಾಗಿ ಈ ಬಾರಿಯ ದಸರಾದಲ್ಲಿ ದೀಪಲಂಕಾರ ವಿಶೇಷವಾಗಿ ಗಮನಸೆಳೆಯಲಿವೆ. ಸಾಂಸ್ಕೃತಿಕ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ದೀಪಗಳಿಂದ ಕಂಗೊಳಿಸಲಿವೆ. 130 ಕಿಲೋ ಮೀಟರ್ ರಸ್ತೆಗಳ ಉದ್ದಕ್ಕೂ ದೀಪಗಳದ್ದೇ ದರ್ಬಾರ್ ನಡೆಯಲಿದೆ.84 ವೃತ್ತಗಳು, ಉದ್ಯಾನವನಗಳು ಹಾಗೂ ಪ್ರಮುಖವಾದ 64 ಸ್ಥಳಗಳಲ್ಲಿ ದೀಪಗಳು ಝಗಮಗಿಸಲಿವೆ.

ಇದರ ಜೊತೆಗೆ ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು ಎಂದು ಅವರು ಇದೇ ವೇಳೆ ತಿಳಿಸಿದರು.

ಇದರ ಜೊತೆಗೆ ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸಚಿವರು ಹಾಗೂ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯನ್ನು ನೀಡಿದರು. ಹಾಗಾಗಿ ಈ ಬಾರಿಯ ದಸರಾ ಅತ್ಯಂತ ವಿಶೇಷವಾಗಿರಲಿದೆ. ಇನ್ನು ಇಂದು ನಡೆದ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಹೆಚ್ ಸಿ ಮಹದೇವಪ್ಪ, ಇಂಧನ ಸಚಿವ ಕೆ ಜೆ ಜಾರ್ಜ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.