ಬೆಂಗಳೂರು; ಕಂಠೀರವ ಸ್ಟೇಡಿಯಂನಲ್ಲಿ ನಡೆದ ರನ್ ಫಾರ್ ರಾಜೀವ್ ಮ್ಯಾರಥಾನ್ ನಲ್ಲಿ ಡಿಸಿಎಂ ಡಿ ಕೆ ಶಿವಕುಮಾ ಭಾಗಿಯಾಗಿದ್ದರು. ಈ ಮ್ಯಾರಥಾನ್ ನಲ್ಲಿ ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಂಗ್ರೆಸ್ ಮುಖಂಡ ಬಿ.ವಿ ಶ್ರೀನಿವಾಸ್ ಸೇರಿ ಹಲವರು ಸೇರಿ ಸಾವಿರಾರು ಯುವಕರು ಭಾಗಿಯಾಗಿದ್ದರು.
ವಾಕ್ ಫಾರ್ ರಾಜೀವ್ ಮ್ಯಾರಥಾನ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ರಾಜೀವ್ ಗಾಂಧಿ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ.ನಾನು ಕೂಡ ಚಿಕ್ಕ ವಯಸ್ಸಿನಲ್ಲಿ 10-15 ಕಿ. ಮೀ. ಓಡುತ್ತಿದ್ದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು.ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಅದಕ್ಕೆ ರಾಜೀವ್ ಗಾಂಧಿ ಅವರು ನಾವು 16ನೇ ವಯಸ್ಸಿಗೆ SSLC ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ನೇಮಿಸುತ್ತೇವೆ.ಅದೇ ರೀತಿ ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು ಎಂದರು.
ನಾನು ವಿದ್ಯಾರ್ಥಿಯಾಗಿದ್ದಾಗ ಎನ್ ಎಸ್ ಯು ಐ ನಾಯಕನಾಗಿದ್ದೆ, ಆಗ ನಮ್ಮ ಬಳಿ ಫೋನ್ ಇರಲಿಲ್ಲ.ಲ್ಯಾಂಡ್ ಲೈನ್ ಸಂಪರ್ಕ ಪಡೆಯಲು 3 ರಿಂದ 4 ವರ್ಷ ಕಾಯಬೇಕಿತ್ತು.ತಂತ್ರಜ್ಞಾನ ಕ್ರಾಂತಿ ಮೂಲಕ ಇಂದು ನಿಮ್ಮೆಲ್ಲರ ಕೈಗೆ ಮೊಬೈಲ್ ಬರುವಂತೆ ಮಾಡಿರುವುದೇ ರಾಜೀವ್ ಗಾಂಧಿ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಧೀಮಂತ ನಾಯಕರ ನೆನಪಲ್ಲಿ ನೀವು ಹೆಜ್ಜೆ ಹಾಕಲು ಬಂದಿದ್ದೀರಿ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ. ನಿಮ್ಮೆಲ್ಲರಿಗೂ ಮಂಗಳವಾಗಲಿ, ಆರೋಗ್ಯ, ಐಶ್ವರ್ಯ ನಿಮ್ಮದಾಗಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಶುಭ ಹಾರೈಸಿದರು.
ಬೆಂಗಳೂರು ಈಗ ಗ್ರೇಟರ್ ಬೆಂಗಳೂರು ಆಗಿದೆ. ಇತ್ತೀಚಿಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಬೆಂಗಳೂರಿನ ಮೂಲಕ ನೋಡಲಾಗುತ್ತಿದೆ ಎಂದರು. ಇದು ಸಾಧ್ಯವಾಗಿದ್ದು ನಿಮ್ಮೆಲ್ಲರಿಂದ ಎಂದು ಡಿಸಿಎಂ ಡಿಕೆಶಿ ಹೇಳಿದರು.











